ಚಿಕನ್‌ ರೋಲ್ ಇಲ್ಲ ಅಂದಿದಕ್ಕೆ ಹೋಟೆಲ್‌ಗೆ ಬೆಂಕಿ ಇಟ್ಟ ದುರುಳರು

ಚಿಕನ್‌ ರೋಲ್ ಇಲ್ಲ ಅಂದಿದಕ್ಕೆ ಹೋಟೆಲ್‌ಗೆ ಬೆಂಕಿ ಇಟ್ಟ ದುರುಳರು

Published : Dec 13, 2022, 06:07 PM IST

ಚಿಕನ್ ರೋಲ್ ಇಲ್ಲ ಎಂದು ಹೇಳಿದ್ದಕ್ಕೆ ಕುಪಿತಗೊಂಡ ಕಿಡಿಗೇಡಿಗಳ ಗುಂಪೊಂದು ಹೊಟೇಲ್ ಸಿಬ್ಬಂದಿ ಜೊತೆಗೆ ಜಗಳ ಮಾಡಿರುವುದು ಮಾತ್ರವಲ್ಲದೆ ಅವರು ತಂಗುವ  ಬಾಡಿಗೆ ಮನೆಯ ಕೊಠಡಿಗೆ ಬೆಂಕಿ ಹಚ್ಚಿ ದುಷ್ಕೃತ್ಯ  ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು (ಡಿ.13): ಚಿಕನ್ ರೋಲ್ ಇಲ್ಲ ಎಂದು ಹೇಳಿದ್ದಕ್ಕೆ ಕುಪಿತಗೊಂಡ ಕಿಡಿಗೇಡಿಗಳ ಗುಂಪೊಂದು ಹೊಟೇಲ್ ಸಿಬ್ಬಂದಿ ಜೊತೆಗೆ ಜಗಳ ಮಾಡಿರುವುದು ಮಾತ್ರವಲ್ಲದೆ ಅವರು ತಂಗುವ  ಬಾಡಿಗೆ ಮನೆಯ ಕೊಠಡಿಗೆ ಬೆಂಕಿ ಹಚ್ಚಿ ದುಷ್ಕೃತ್ಯ  ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ  ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿ ವಾಸವಿದ್ದ ಹೋಟೆಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೇವರಾಜ್ ಮತ್ತು ಗಣೇಶ ಎಂಬಾತನನ್ನು ಬಂಧಿಸಲಾಗಿದೆ. ಮತ್ತೋರ್ವ ತಲೆ ಮರೆಸಿಕೊಂಡಿದ್ದಾನೆ. ತಡರಾತ್ರಿ ಚಿಕನ್ ರೋಲ್ ತಿನ್ನಲು ಅರೋಪಿಗಳು  ಕುಮಾರ್ ಹೋಟೆಲ್ ಗೆ ಬಂದಿದ್ದರು. ಈ ವೇಳೆ  ಹೊಟೇಲ್ ಮುಚ್ಚುವ ಸಮಯವಾಗಿತ್ತು. ಹೀಗಾಗಿ ಹೋಟೆಲ್ ಸಿಬ್ಬಂದಿಗಳು ಮುಚ್ಚುವ ಸಮಯವಾಗಿದೆ ಹೀಗಾಗಿ ಚಿಕನ್ ರೋಲ್ ಇಲ್ಲ ಎಂದಿದ್ದಾರೆ. ಈ ವೇಳೆ ದೇವರಾಜ್ ಮತ್ತು ಗಣೇಶ  ಚಿಕನ್ ರೋಲ್​ಗಾಗಿ ಜಗಳ ಮಾಡಿದ್ದಾರೆ. ಗಲಾಟೆ ವೇಳೆ ಕುಡಿದ ಅಮಲಿನಲ್ಲಿದ್ದ ಮೂವರನ್ನು ಹೊಟೇಲ್ ಸಿಬ್ಬಂದಿ ಥಳಿಸಿ ಕಳುಹಿಸಿದ್ದಾರೆ. ಇದಕ್ಕೆ ಕೆರಳಿದ ಆರೋಪಿಗಳು ಪೆಟ್ರೋಲ್ ಪಂಪ್ ಗೆ ಹೋಗಿ ಎಂಟು ಲೀಟರ್ ಪೆಟ್ರೋಲ್ ಖರೀದಿ ಮಾಡಿ ಹೋಟೆಲ್ ಪಕ್ಕವೇ ಇದ್ದ ಸಿಬ್ಬಂದಿಯ ಬಾಡಿಗೆ  ಮನೆಗೆ ಬೆಂಕಿ ಇಟ್ಟಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಮತ್ತೋರ್ವ ಆರೋಪಿಯ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!