ನಂಜನಗೂಡು ಪಿಎಸ್‌ಐ ಪುತ್ರನ ಬೈಕ್‌ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಬಲಿ, ಅಧಿಕಾರಿ ಅಮಾನತ್ತಿಗೆ ಆಗ್ರಹ

ನಂಜನಗೂಡು ಪಿಎಸ್‌ಐ ಪುತ್ರನ ಬೈಕ್‌ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಬಲಿ, ಅಧಿಕಾರಿ ಅಮಾನತ್ತಿಗೆ ಆಗ್ರಹ

Published : Sep 17, 2023, 04:29 PM ISTUpdated : Sep 17, 2023, 04:31 PM IST

ನಂಜನಗೂಡಿನ ಮಹಿಳಾ ಪಿಎಸ್ಐ ಯಾಸ್ಮಿನ್‌ ತಾಜ್‌ ಅವರ ಪುತ್ರನ ಪುಂಡಾಟಕ್ಕೆ ಅಮಾಯಕ ವೃದ್ಧವ್ಯಕ್ತಿ ಬಲಿಯಾಗಿದ್ದಾರೆ. ಕೂಡಲೇ ಪಿಎಸ್‌ಐ ಅಮಾನತ್ತುಗೊಳಿಸಿ ಬಂಧಿಸುವಂತೆ ಮೃತ ವ್ಯಕ್ತಿಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೈಸೂರು (ಸೆ.17): ನಂಜನಗೂಡಿನ ಮಹಿಳಾ ಪಿಎಸ್ಐ ಪುತ್ರನ ಪುಂಡಾಟಕ್ಕೆ ಅಮಾಯಕ ವೃದ್ಧವ್ಯಕ್ತಿ ಬಲಿಯಾಗಿದ್ದಾರೆ. ಈಗಾಗಲೇ ಬೈಕ್‌ ಕಳ್ಳತನ ಹಾಗೂ ವ್ಹೀಲಿಂಗ್‌ ಮಾಡಿದ ಆರೋಪದಡಿ ಜೈಲಿಗೆ ಕಳಿಸಿ ಬುದ್ಧಿ ಕಲಿಸುವಂತೆ ಎಫ್‌ಐಆರ್‌ ದಾಖಲಿಸಿದರೂ ಪಿಎಸ್‌ಐ ಮಗನೆಂಬ ಕಾರಣಕ್ಕೆ ಉಡಾಫೆ ಮಾಡಲಾಗಿತ್ತು. ಆದರೆ, ಈಗ ಪತ್ತದೇ ಬೈಕ್‌ ವ್ಹೀಲಿಂಗ್‌ ಮಾಡಿ ವೃದ್ಧನೊಬ್ಬನ ಸಾವಿಗೆ ಕಾರಣವಾದರೂ ಪುಂಡನನ್ನು ಬಂಧಿಸಿಲ್ಲ. ಹೀಗಾಗಿ, ನಮ್ಮ ತಂದೆಯ ಸಾವಿಗೆ ಕಾರಣವಾದ ಆರೋಪಿ ಸೇರಿದಂತೆ, ಮಗನ ವಿಚಾರಕ್ಕೆ ಉಡಾಫೆಯ ವರ್ತನೆ ತೋರುತ್ತಿರುವ ನಂಜನಗೂಡಿನ ಮಹಿಳಾ ಪಿಎಸ್‌ಐ ಯಾಸ್ಮಿನ್‌ ತಾಜ್‌ ಅವರನ್ನೂ ಬಂಧಿಸಿ ಜೈಲಿಗಟ್ಟಬೇಕು ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಇನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರದ ಬಳಿ, ಮೃತ ವೃದ್ಧನ ಶವವನ್ನಿಟ್ಟು ಪ್ರತಿಭಟನೆ ಆರಂಭಿಸಿದ್ದಾರೆ. ನಾವು ಯಾವುದೇ ಕಾರಣಕ್ಕೂ ಶವ ತೆಗೆದುಕೊಂಡು‌ ಹೋಗಲ್ಲ. ಪಿಎಸ್ಐ ಯಾಸ್ಮಿನ್ ತಾಜ್ ಅವರನ್ನೂ ಅಮಾನತ್ತು ಮಾಡಿ. ಜೊತೆಗೆ, ಯಾಸ್ಮಿತ್ ತಾಜ್ ಅವರನ್ನೂ‌ ಬಂಧಿಸಬೇಕು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more