ಶಂಕಿತ ಉಗ್ರರ ಹೆಡೆಮುರಿ ಕಟ್ಟಲು ಎನ್‌ಐಎ ಮಿಂಚಿನ ಕಾರ್ಯಾಚರಣೆ ಹೀಗಿತ್ತು

Aug 8, 2021, 3:30 PM IST

ಬೆಂಗಳೂರು (ಆ. 08):  ಸಿರಿಯಾ ಮೂಲದ ಐಸಿಸ್‌ ಹಾಗೂ ಉಗ್ರ ಸಂಘಟನೆಗಳ ಸಂಬಂಧವಿರುವವರ ಜತೆ ನಂಟಿರುವ ಶಂಕೆಯ ಮೇರೆಗೆ ರಾಷ್ಟ್ರೀಯ ತನಿಖಾ ದಳ ಸ್ಥಳೀಯ ಪೊಲೀಸರ ಸಹಕಾರದಿಂದ ಭಟ್ಕಳದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿರುವುದು ದೇಶಾದ್ಯಂತ ಸುದ್ದಿಯಾಗಿದೆ. 

ಮಂಗಳೂರಿನ ಮಾಜಿ ಶಾಸಕರ ಮನೆ ಮೇಲೆ NIA ದಾಳಿ: ISIS ನಂಟು- ಓರ್ವ ಅರೆಸ್ಟ್

ಸಾಗರಸ್ತೆಯ ಮನೆಯ ಇಬ್ಬರು, ಉಮ್ಮರ್‌ಸ್ಟ್ರೀಟಿನ ಮನೆಯ ಒಬ್ಬನನ್ನು ಸೇರಿ ಒಟ್ಟೂಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಎನ್‌ಐಎ ತಂಡ ತೆಂಗಿನಗುಂಡಿ ಕ್ರಾಸಿನಲ್ಲಿರುವ ಮನೆಯೊಂದಕ್ಕೆ ಹೋಗಿ ವಿಚಾರಣೆ ನಡೆಸಿದ್ದಾರೆ. ಬಳಿಕ ಒಬ್ಬನನ್ನು ಬಂಧಿಸಿದೆ. ಬಂಧಿತ ಜಾಫ್ರಿಯಾ ಮೇಲೆ ಕಳೆದ ಎರಡು ವರ್ಷಗಳಿಂದ ಐಎನ್‌ಎ ಕಣ್ಣಿಟ್ಟಿತ್ತು. ಜಾಫ್ರಿಯ ಸಂಪೂರ್ಣ ಚಟುವಟಿಕೆಗಳು, ಇವರ ಈ-ಮೇಲ್‌ ಹಾಗೂ ಅಂತರ್‌ಜಾಲದ ಎಲ್ಲ ಚಟುವಟಿಕೆಗಳನ್ನು ಕೂಡಾ ನಿಗಾ ವಹಿಸಲಾಗಿತ್ತು. ವಾಟ್ಸಾಪ್‌ ಗ್ರೂಪ್‌ನಲ್ಲಿಯೂ ಕಳುಹಿಸಿರುವ ಮೆಸೇಜ್‌ಗಳು ಎನ್‌ಐಎಗೆ ಲಭ್ಯವಾಗಿದೆ. ಹಾಗಾದರೆ ಐಎನ್‌ಎ ಕಾರ್ಯಾಚರಣೆ ಹೇಗಿತ್ತು..? ಇಲ್ಲಿದೆ ನೋಡಿ.