Aug 16, 2022, 7:11 PM IST
ಮಂಗಳೂರು (ಆ. 16): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ (NIA) ತನಿಖೆಯಲ್ಲಿ ಅಸಲಿ ಕಾರಣ ಬಯಲಾಗಿದೆ. ಸ್ಥಳೀಯರಲ್ಲಿ ಭಯ ಹುಟ್ಟಿಸಲು ಕೃತ್ಯಕ್ಕೆ ಸಂಚು ಮಾಡಲಾಗಿತ್ತು ಎಂಬ ಸ್ಫೋಟಕ ಸಂಗತಿ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್‌ಐಎಯಿಂದ ಎಫ್‌ಐಆರ್ ದಾಖಲಾಗಿದ್ದು ಬೆಳ್ಳಾರೆ ಪೊಲೀಸ್ ಠಾಣೆ ಫೈಲ್ ಪಡೆದು ಎನ್‌ಐಎ ತನಿಖೆ ನಡೆಸತ್ತಿದೆ. ಒಟ್ಟು ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಝಾಕೀರ್, ಮಹಮ್ಮದ್, ಶಫೀಕ ಹಾಗೂ ಶೇಜ್ ಸದ್ದಾಂ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Praveen Nettaru Murder Case: ಆರೋಪಿಗಳ ಬಂಧನ ಪ್ರಕ್ರಿಯೆ ಒಪ್ಪುವಂಥದ್ದಲ್ಲ: SDPI