ಜೂ.7ರಂದು ಪಾಂಡವಪುರ ತಾಲ್ಲೂಕು ಬೇಬಿ ಗ್ರಾಮದ ಕೆರೆಕೋಡಿ ಕಟ್ಟೆಯ ಕೆಳಗೆ ಹರಿಯುವ ನೀರಿನಲ್ಲಿ 30-32 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಗ್ರಾಮದ ಮಾಡರಹಳ್ಳಿ ರಸ್ತೆ ಬಳಿ ಸಿಡಿಎಸ್ ನಾಲೆಗೆ ಸಂಪರ್ಕಿಸುವ ಸಾರೋಡುಹಳ್ಳದ ಪಕ್ಕದ ಭತ್ತದ ಗದ್ದೆಯಲ್ಲಿ 40-45 ವರ್ಷ ವಯಸ್ಸಿನ ಮತ್ತೊಬ್ಬ ಅಪರಿಚಿತ ಮಹಿಳೆಯರ ಶವಗಳು ಪತ್ತೆಯಾಗಿದ್ದವು.

ಎರಡೂ ಪ್ರಕರಣಗಳಲ್ಲಿ ತುಂಡರಿಸಿದ ಇಬ್ಬರು ಮಹಿಳೆಯರ ಅರ್ಧ ದೇಹಗಳು ಮಾತ್ರ ಪತ್ತೆಯಾಗಿದ್ದವು. ಎರಡೂ ಶವಗಳಲ್ಲಿ ಸೊಂಟದಿಂದ ಮೇಲ್ಭಾಗದ ದೇಹವೇ ಇರಲಿಲ್ಲ. ಹೀಗಾಗಿ ಶವಗಳ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಈ ಪ್ರಕರಣಗಳು ಪೊಲೀಸರಿಗೆ ಸವಾಲಾಗಿದ್ದವು.
9 ತನಿಖಾ ತಂಡಗಳನ್ನು ರಚಿಸಿ, ತಾಂತ್ರಿಕ ಮಾಹಿತಿಗಳನ್ನು ಕಲೆ ಹಾಕಲು 2 ತಾಂತ್ರಿಕ ಪರಿಣಿತ ತಂಡಗಳನ್ನು ರಚಿಸಲಾಗಿತ್ತು. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 1,116ಕ್ಕೂ ಹೆಚ್ಚಿನ ಮಹಿಳೆಯರು ಕಾಣೆಯಾದ ಪ್ರಕರಣಗಳನ್ನು ಪರಿಶೀಲಿಸಲಾಗಿತ್ತು. ಕೊನೆಗೆ ಜೂ.3ರಂದು ಗೀತಾ ಕಾಣೆಯಾಗಿದ್ದ ಪ್ರಕರಣ ಜು.7ರಂದು ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಎರಡೂ ಪ್ರಕರಣಗಳನ್ನು ಒಂದೇ ರೀತಿಯ ಸಾಮ್ಯತೆಗಳು ಇದ್ದವು. ಹೀಗಾಗಿ ಗೀತಾಳ ಮೊಬೈಲ್ ಕರೆಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಈ ರೋಚಕ ಕಾರ್ಯಾಚರಣೆ ಹೇಗಿತ್ತು ನೋಡಿ..!