ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಎನ್ನುವ ಆರೋಪದ ಮೇಲೆ ಶಿರಸಿಯಲ್ಲಿ ಶಂಕಿತ ಉಗ್ರ ಇದ್ರೀಸ್‌ನನ್ನು ಬಂಧಿಸಲಾಗಿದೆ.
ಬೆಂಗಳೂರು (ನ. 12): ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಯುವಕರನ್ನು ನೇಮಕಾತಿ ಮಾಡಿಕೊಳ್ಳಲು ಲಷ್ಕರ್ ಎ ತೊಯ್ಬಾ ಸಂಘಟನೆ ಪಾಕಿಸ್ತಾನ ಮೂಲದ ನಿಯಂತ್ರಕರು ಸ್ಕೆಚ್ ಹಾಕಿದ್ದರು. ಇದರ ಭಾಗವಾಗಿ ಕೆಲಸ ಮಾಡುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಯುವಕನೊಬ್ಬನನ್ನು ಎನ್‌ಐಎ ಬಂಧಿಸಿದೆ. ಶಿರಸಿ ತಾಲೂಕಿನ ಆರೆಕೊಪ್ಪದ ಗ್ರಾ. ಪಂ ಮಾಜಿ ಸದಸ್ಯರ ಪುತ್ರ ಸಯ್ಯದ್ ಇದ್ರೀಸ್ ಬಂಧಿತ ಯುವಕ.