Jul 11, 2023, 1:25 PM IST
ಆತ ಚಿಂತಕ ಚಕ್ರವರ್ತಿ ಸೂಲಿಬೆಲೆ ಸ್ಥಾಪಿಸಿರೋ ಯುವ ಬ್ರಿಗೇಡ್ ನಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ. ಯುವ ಬ್ರಿಗೇಡ್( Yuva Brigade) ನಡೆಸೋ ಸಮಾಜಮುಖಿ ಕೆಲಸಗಳಲ್ಲಿ ಮುಂದೆ ನಿಲ್ಲುತ್ತಿದ್ದ. ಯುವ ಬ್ರಿಗೇಡ್ ನಲ್ಲಿ ಯುವಕರನ್ನು ಒಳ್ಳೆ ಕಾರ್ಯಗಳನ್ನು ಮಾಡಲು ಪ್ರೇರೇಪಿಸುತ್ತಿದ್ದ . ಅಂತಹ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಸ್ನೇಹಿತರೇ ಭೀಕರವಾಗಿ ಹತ್ಯೆ(murder) ಮಾಡಿದ್ದಾರೆ. ಪುನೀತ್ ಪೋಟೋ ಇಡುವ ವಿಚಾರಕ್ಕೆ ಕಿರಿಕ್ ಮಾಡಿಕೊಂಡ ಸ್ನೇಹಿತರು ಜೊತೆಯಲ್ಲೇ ಇದ್ದವನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ಹನುಮ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿದ್ದ ಊರಿನಲ್ಲಿ ಸ್ಮಶಾನ ಮೌನ ಆವರಿಸಿದೆ. ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ವೇಣುಗೋಪಾಲ್ ನಾಯಕ್ (Venugopal Naik) ಹತ್ಯೆಯಾದ ಯುವಕನಾಗಿದ್ದಾನೆ. ಮೈಸೂರಿನ ಟೀ ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಆಗಿದ್ದ.
ಇದನ್ನೂ ವೀಕ್ಷಿಸಿ: ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು ಜೈನಮುನಿ ಹತ್ಯೆ: ಐಸಿಸ್ ಶಂಕೆ..ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ..!