Feb 9, 2020, 4:30 PM IST
ಧಾರವಾಡ (ಫೆ. 09): ಅಮ್ಮಿನಬಾವಿ ಗ್ರಾಮದ ಬಳಿ ಹುಬ್ಬಳ್ಳಿ- ಧಾರವಾಡ ಅವಳಿ ನಗರಕ್ಕೆ ನೀರು ಪೂರೈಸುವ 40 ದಶಲಕ್ಷ ಲೀಟರ್ ಸಾಮರ್ಥ್ಯದ ಜಲಶುದ್ಧೀಕರಣ ಘಟಕ ನಿರ್ಮಿಸಲಾಗಿದೆ. ಈ ಘಟಕದಲ್ಲಿ ಸ್ಥಳೀಯ ಭಾಗದ ಯುವಕರಿಗೆ ಉದ್ಯೋಗ ನೀಡಬೇಕು. ಇಲ್ಲದಿದ್ದರೆ ನಾವು ನೀರು ಬಿಡೋದಿಲ್ಲ ಎಂದು ಕೇಂದ್ರ ರಾಜ್ಯ ಸರ್ಕಾರದ ಸಚಿವರಿಗೆ ಬಿಜೆಪಿ ಶಾಸಕ ಅಮೃತ ದೇಸಾಯಿ ಎಚ್ಚರಿಕೆ ನೀಡಿದ್ದಾರೆ.