ಮಧ್ಯಂತರ ಮನವಿ ತಿರಸ್ಕರಿಸಿದ ಹೈಕೋರ್ಟ್| ಸಿಇಟಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್| ಸಿಇಟಿ ಪರೀಕ್ಷೆಯಲ್ಲಿ 51 ಜನ ಕೊರೋನಾ ಸೋಂಕಿತರು ಭಾಗಿ|
ಬೆಂಗಳೂರು(ಜು.30): ಸಿಇಟಿ ಪರೀಕ್ಷೆಯನ್ನ ಮುಂದೂಡಬೇಕು ಎಂಬ ಮಧ್ಯಂತರ ಮನವಿಯನ್ನ ಹೈಕೋರ್ಟ್ ತಿರಸ್ಕರಿಸಿದೆ. ಇಂದು ಮತ್ತು ನಾಳೆ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಕೋವಿಡ್ ಕೇರ್ ಸೆಂಟರ್‌ನಿಂದ ಪೊಲೀಸ್ ಪೇದೆ ನಾಪತ್ತೆ..!
ಪರೀಕ್ಷೆ ನಡೆಸುವ ವೇಳೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನ ಕಟ್ಟುನಿಟ್ಟಾಗಿ ಪಾಲಿಸಬೇಕು. ಕಂಟೈನ್‌ಮೆಂಟ್ ವಲಯದ ವಿದ್ಯಾರ್ಥಿಗಳು ಹಾಗೂ ಕೊರೋನಾ ಸೋಂಕಿತ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಹೇಳಿದೆ. ಸಿಇಟಿ ಪರೀಕ್ಷೆಯಲ್ಲಿ 51 ಜನ ಕೊರೋನಾ ಸೋಂಕಿತರು ಭಾಗಿಯಾಗಿದ್ದಾರೆ.