Jun 14, 2021, 5:54 PM IST
ಬೆಂಗಳೂರು (ಜೂ. 14): ರಾಜ್ಯದಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಜೂ. 15 ರಿಂದ ಆರಂಭವಾಗಲಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ.
PUC ಮೌಲ್ಯಾಂಕನ, SSLC ಪರೀಕ್ಷೆ, ಶಿಕ್ಷಕರ ವರ್ಗಾವಣೆಗೆ ಬಗ್ಗೆ ಸುರೇಶ ಕುಮಾರ್ ಮಾಹಿತಿ
ಶಿಕ್ಷಣ ಇಲಾಖೆ ಜುಲೈ 1ರಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಇಲಾಖೆ ಸೂಚಿಸಿದ್ದರೂ ಜೂ.15ರಿಂದ 30ರವರೆಗೆ ಶಿಕ್ಷಕರು ಶಾಲೆಗೆ ಹಾಜರಾಗಿ ಶಾಲಾ ಸ್ವಚ್ಛತೆ, ಪ್ರವೇಶ ಪ್ರಕ್ರಿಯೆ ಸೇರಿದಂತೆ ಶಾಲಾ ಪ್ರಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಸೂಚಿಸಿದೆ. ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಲು ಆಗಸ್ಟ್ 30ರೊಳಗೆ ಕಾಲಾವಕಾಶ ನೀಡಲಾಗಿದೆ. ಜು.1ರಿಂದ ಶಾಲೆಗಳು ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಬಹುದು ಎಂದು ಶಿಕ್ಷಣ ಇಲಾಖೆ ಗೈಡ್‌ಲೈನ್ಸ್‌ನಲ್ಲಿ ತಿಳಿಸಲಾಗಿದೆ.