ಪ್ರಾಧ್ಯಾಪಕರ ನೇಮಕಾತಿ ಹಗರಣ: ಅತಿಥಿ ಉಪನ್ಯಾನಕಿ ಸೌಮ್ಯಾ ವಶಕ್ಕೆ, ಈಕೆಯೇ ಕಿಂಗ್‌ಪಿನ್.?

Apr 25, 2022, 12:12 PM IST

ಬೆಂಗಳೂರು (ಏ. 25): ಪಿಎಸ್‌ಐ ಹುದ್ದೆಗಳ ನೇಮಕಾತಿ (PSI Exam Scam) ಸಂಬಂಧ ನಡೆದ ಪರೀಕ್ಷೆಯಲ್ಲಿ ಅಕ್ರಮ ಬಹಿರಂಗವಾದ ಬೆನ್ನಲ್ಲೇ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)) ಕಳೆದ ಮಾಚ್‌ರ್‍ನಲ್ಲಿ ನಡೆಸಿದ ರಾಜ್ಯ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕರ ನೇಮಕಾತಿಯಲ್ಲೂ ಭಾರೀ ಅಕ್ರಮ ನಡೆದಿರುವ ವಾಸನೆ ಹರಡಿದ್ದು, ಇದೀಗ ಪ್ರಕರಣ ದಾಖಲಾಗಿದೆ.

'ಮುಸಲ್ಮಾನರು ಭಯಪಡುವ ಅಗತ್ಯವಿಲ್ಲ, ಕಾನೂನು ಕೈಗೆತ್ತಿಕೊಂಡರೆ ತಕ್ಕ ಶಾಸ್ತಿ'

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ (KEA)) ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಭೂಗೋಳಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದಡಿ ಮಲ್ಲೇಶ್ವರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. 

ವಾಟ್ಸಾಪ್‌ನಲ್ಲಿ ಹಲವರಿಗೆ ಪ್ರಶ್ನೆ ಪತ್ರಿಕೆ ಫಾವರ್ಡ್‌ ಮಾಡಿದ ಆರೋಪದಡಿ ಅತಿಥಿ ಉಪನ್ಯಾಸಕಿ, ಮೈಸೂರು ಮೂಲದ ಸೌಮ್ಯಾ(32) ಎಂಬ ಯುವತಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಪ್ರಶ್ನೆ ಪತ್ರಿಕೆ ನೀಡಿದವರು ಯಾರು? ಎಷ್ಟುಮಂದಿಗೆ ಪ್ರಶ್ನೆ ಪತ್ರಿಕೆ ಫಾವರ್ಡ್‌ ಮಾಡಲಾಗಿದೆ? ಈ ಪ್ರಶ್ನೆ ಪತ್ರಿಕೆ ಸೋರಿಕೆಯ ಕಿಂಗ್‌ ಪಿನ್‌ ಯಾರು ಎಂಬುದು ಸೇರಿದಂತೆ ಪಶ್ನೆ ಪತ್ರಿಕೆ ಸೋರಿಕೆಯ ಮೂಲ ಪತ್ತೆಗೆ ಪೊಲೀಸರು ಕೈ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.