Mar 4, 2022, 11:08 AM IST
ಬೆಂಗಳೂರು (ಮಾ. 04): ಕಾರ್ಮಿಕ ಇಲಾಖೆ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಶ್ರೇಯೋಭಿವೃದ್ಧಿ ಜತೆಗೆ ಅವರ ಮಕ್ಕಳ ಶ್ರೇಯೋಭಿವೃದ್ಧಿಗೂ ಸರ್ಕಾರ ಮುಂದಡಿ ಇಟ್ಟಿದೆ. ಈ ನಿಟ್ಟಿನಲ್ಲಿ ಅವರ ಮಕ್ಕಳಿಗೆ ಐಎಎಸ್ ಮತ್ತು ಕೆಎಎಸ್ ತರಬೇತಿ ಕೊಡಿಸಲು ಮುಂದಾಗಿದೆ ಎಂದು ಕಟ್ಟಡ ಹಾಗೂ ಇತರೆ ನಿರ್ಮಾಣ ಹಾಗೂ ಕಾರ್ಮಿಕ ಇಲಾಖೆಯ ಸಚಿವ ಅರಬೈಲ್ ಶಿವರಾಂ ಹೆಬ್ಬಾರ್ ಹೇಳಿದರು.
ರಾಜ್ಯದ ಕಾರ್ಮಿಕ ಇಲಾಖೆ ಉದ್ಯೋಗ ಹಾಗೂ ಉದ್ಯಮಿ ಸ್ನೇಹಿಯಾಗಿ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಬೃಹತ್ ಕ್ರಾಂತಿಕಾರಿ ಬದಲಾವಣೆ ತರಲು ಹೊರಟಿದೆ. ಉದ್ಯಮಗಳು ಹೆಚ್ಚಾದರೆ, ಉದ್ಯೋಗ ಹೆಚ್ಚಲಿವೆ. ಇದರಿಂದ ದುಡಿಯುವ ಕೈಗಳಿಗೆ ಸುಲಭವಾಗಿ ಕೆಲಸ ಲಭಿಸಲಿವೆ. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ದಾಪುಗಾಲು ಹಾಕುತ್ತಿದೆ. ಅನಕ್ಷರತೆ ಮತ್ತು ಅರಿವಿನ ಕೊರತೆಯಿಂದ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿದ್ದು, ಜಾಗೃತಿ ಮೂಡಿಸುತ್ತಿದೆ ಎಂದರು.