ಈಗಾಗಲೇ ರಾಜ್ಯದಲ್ಲಿ 9 ರಿಂದ 12 ನೇ ತರಗತಿ ಶಾಲೆಗಳು ಸುಗಮವಾಗಿ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ 6 ರಿಂದ 8 ನೇ ತರಗತಿಗಳನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಶಿಕ್ಷಣ ಇಲಾಖೆ ಉದ್ದೇಶಿಸಿದೆ.
ಬೆಂಗಳೂರು (ಫೆ. 13): ಈಗಾಗಲೇ ರಾಜ್ಯದಲ್ಲಿ 9 ರಿಂದ 12 ನೇ ತರಗತಿ ಶಾಲೆಗಳು ಸುಗಮವಾಗಿ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ 6 ರಿಂದ 8 ನೇ ತರಗತಿಗಳನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಶಿಕ್ಷಣ ಇಲಾಖೆ ಉದ್ದೇಶಿಸಿದೆ.
ಫೆ. 16 ರಂದು ಆರೋಗ್ಯ ಇಲಾಖೆ ಜತೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ತರಗತಿ ಆರಂಭಕ್ಕೆ ಪೋಷಕರು, ಖಾಸಗಿ ಶಾಲಾ ಒಕ್ಕೂಟ ಸಮ್ಮತಿ ನೀಡಿದ್ದು, ಸಭೆಯ ಬಳಿಕ ಅಂತಿಮ ನಿರ್ಧಾರ ಹೊರ ಬೀಳಲಿದೆ.