Thirthahalli Hijab Row: ಗೃಹ ಸಚಿವರ ತವರು ತೀರ್ಥಹಳ್ಳಿ ಸರಕಾರಿ ಕಾಲೇಜಿಗೆ ತಲುಪಿದ ಹಿಜಾಬ್ ವಿವಾದ

Feb 7, 2022, 7:41 PM IST

ತೀರ್ಥಹಳ್ಳಿ(ಫೆ.7): ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ  ಆರಂಭವಾದ ಹಿಜಾಬ್  (Hijab) ಹಾಗೂ ಕೇಸರಿ ಶಾಲು  (Saffron Shawl)  ವಿವಾದ ಇದೀಗ ಕರ್ನಾಟಕ ರಾಜ್ಯಾದ್ಯಂತ ವ್ಯಾಪಿಸಿದೆ. ಕೇಸರಿ ಶಾಲು ಧರಿಸಿ ಕಾಲೇಜಿನೊಳಗೆ ತೆರಳಿದ್ದಕ್ಕೆ ವಿರೋಧ ವ್ಯಕ್ತವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ (Thirthahalli) ತಾಲೂಕಿನ ಪದವಿ ಕಾಲೇಜೊಂದರಲ್ಲಿ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ  (Araga Jnanendra) ತವರು ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಬಾಳೆಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು.

Hijab Saffron Shawl Row: ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಅರಗ ಜ್ಞಾನೇಂದ್ರ ಕಿಡಿ

ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳನ್ನು ತರಗತಿ ಪ್ರವೇಶಿಸದಂತೆ ಪ್ರಾಂಶುಪಾಲರು, ಉಪನ್ಯಾಸಕರು ತಡೆದರು. ಹಾಗಾಗಿ ಕಾಲೇಜು ಆವರಣದಲ್ಲೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಿದ ಮೇಲೆ ಹಿಜಾಬ್ ಧರಿಸಲು ಅವಕಾಶ ನೀಡಿದ್ದೇಕೆ. ಒಂದು ವೇಳೆ ಹಿಜಾಬ್‌ಗೆ ಅವಕಾಶ ನೀಡಿದರೆ ತಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು.