Apr 21, 2022, 12:23 PM IST
ಹುಬ್ಬಳ್ಳಿ (ಏ.21): ವಾಟ್ಸ್ ಆ್ಯಪ್ ನಲ್ಲಿ ವಿವಾದಾತ್ಮಕ ಸ್ಟೇಟಸ್ ಹಾಕಿ ಬಂಧಿತನಾಗಿರುವ ಹುಬ್ಬಳ್ಳಿಯ (Hubballi) ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ (Abhishek Hiremath) ಮಧ್ಯಂತರ ಜಾಮೀನು (interim bail) ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಬುಧವಾರ ವಜಾಗೊಳಿಸಿದೆ. ಆದರೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೊಲೀಸರಿಗೆ ಆದೇಶಿಸಿದೆ.
2023ರ ಹೊತ್ತಿಗೆ ರಾಜ್ಯದಲ್ಲಿ 6,500 ಸ್ಮಾರ್ಟ್ ಕ್ಲಾಸ್ ಗಳ ಸ್ಥಾಪನೆ
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅಭಿಷೇಕ ಹಿರೇಮಠ ನನ್ನು ವಿವಾದಾತ್ಮಕ ಸ್ಟೇಟಸ್ ಹಾಕಿದ್ದ ಆರೋಪದಡಿ ಏಪ್ರಿಲ್ 16ರಂದು ಪೊಲೀಸರು ಬಂಧಿಸಿದ್ದು, ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ವಿದ್ಯಾರ್ಥಿಗೆ ಏ. 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ (PU exams) ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ 4ನೇ ಅಧಿಕ ದಿವಾಣಿ ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಆದರೆ, ಅಭಿಷೇಕನಿಗೆ ಪರೀಕ್ಷೆ ಬರೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕೆಂದು ನ್ಯಾಯಾಲಯ ಹೇಳಿದೆ.