Jun 4, 2022, 4:05 PM IST
ಬೆಂಗಳೂರು (ಜೂ. 4): ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ (textbook revision) ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj bommai) ಅವರು ಈ ಸಂಬಂಧ ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವಿವಾದತ್ತೆ ತೆರೆ ಎಳೆಯಲು ಯತ್ನಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಕಾರ್ಯ ಪೂರ್ಣಗೊಂಡಿರುವುದರಿಂದ ಸಮಿತಿ ವಿಸರ್ಜನೆ ಮಾಡಲಾಗಿದೆ. ಯಾವುದೇ ಒತ್ತಡದಿಂದ ಈ ನಿರ್ಧಾರ ಕೈಗೊಂಡಿಲ್ಲ. ಹೊಸ ಸಮಿತಿ ರಚಿಸುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮದು ಬಸವ ಪಥ ಸರ್ಕಾರ: ಪಠ್ಯದಲ್ಲಿ ಬಸವಣ್ಣ ನಿಜ ಇತಿಹಾಸದ ಪರಿಚಯ: ಸಿಎಂ
ಇನ್ನು ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವನ್ನು ಸಮರ್ಥಿಸಿಕೊಂಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್ ( BC Nagesh) ರಾಜ್ಯದಲ್ಲಿ ಅನೇಕ ಬಾರಿ ಪಠ್ಯಪುಸ್ತಕ ಪರಿಷ್ಕರಣೆ ಆಗಿದ್ದು, ಬರಗೂರು ರಾಮಚಂದ್ರಪ್ಪ ಸಮಿತಿಗೂ ಆಕ್ಷೇಪ ವ್ಯಕ್ತವಾಗಿತ್ತು. ಅವರ ಸಮಿತಿಯಲ್ಲಿ ಬಸವಣ್ಣನ ಪಾಠವನ್ನು ಪರಿಷ್ಕರಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹೊಸ ಸಮಿತಿ ರಚನೆ ಆಗಿದೆ. ಹಿಂದಿನ ಪರಿಷ್ಕರಣೆಯನ್ನು ಮುಂದುವರೆಸಿದ್ದೇವೆ ಅಷ್ಟೇ ಎಂದು ಹೇಳಿದ್ದಾರೆ.