Mar 27, 2022, 2:38 PM IST
ಬೆಂಗಳೂರು(ಮಾ.27): ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC exam) ಶುರುವಾಗುತ್ತಿದ್ದು, ಕ್ಷಣಗಣನೆ ಆರಂಭವಾಗಿದೆ. ಕೊರೋನಾ ನಂತರ ಇದೇ ಮೊದಲ ಬಾರಿಗೆ SSLC ಪರೀಕ್ಷೆ ನಡೆಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್ ನಂತರ ನಡೆಯುತ್ತಿರುವ ಮೊದಲ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದಾಗಿದ್ದು, ಏಪ್ರಿಲ್ 11 ರವರೆಗೆ ನಡೆಯಲಿದೆ. ಈ ಬಾರಿ ಒಟ್ಟು 8 ಲಕ್ಷದ 73 ಸಾವಿರದ 846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
SSLC 2022 Exam ಹಿಜಾಬ್ ಧರಿಸಿದ್ರೆ ಪರೀಕ್ಷೆಗಿಲ್ಲ ಎಂಟ್ರಿ, ಶಿಕ್ಷಣ ಇಲಾಖೆ ಆದೇಶ
ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಹೇರಲಾಗಿದೆ. ಈ ಬಾರಿ ಕಠಿಣ ಪರೀಕ್ಷೆ ಇಲ್ಲ. ಜೊತೆಗೆ ಬಹು ಆಯ್ಕೆ ಮಾದರಿಯ ಪ್ರಶ್ನೆಗಳನ್ನು ಹೆಚ್ಚಿಸಲಾಗಿದೆ. ಇನ್ನು ಹಿಜಾಬ್ ಧರಿಸಿ ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶವಿಲ್ಲ ಎಂದು ಈಗಾಗಲೇ ಶಿಕ್ಷಣ ಇಲಾಖೆ (Karnataka Education Department) ಸ್ಪಷ್ಟಪಡಿಸಿದೆ. ಅಂತವರಿಗೆ ಮತ್ತೆ ಎರಡನೇ ಅವಕಾಶ ಕೂಡ ಸಿಗುವುದಿಲ್ಲ. ಮಾತ್ರವಲ್ಲ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಸಮವಸ್ತ್ರ ಧರಿಸಿಯೇ ಬರಬೇಕೆಂದು ಕಡ್ಡಾಯಗೊಳಿಸಲಾಗಿದೆ.