Feb 10, 2021, 3:56 PM IST
ಬೆಂಗಳೂರು, (ಫೆ10): ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶೈಕ್ಷಣಿಕ ಚಟುವಟಿಕೆಗಳು ಇದೀಗ ಹಂತ-ಹಂತವಾಗಿ ಆರಂಭವಾಗುತ್ತಿವೆ. ಇದರ ನಡುವೆ ಶಾಲಾ ಶುಲ್ಕದ ವಿಚಾರವಾಗಿ ವಿದ್ಯಾರ್ಥಿಗಳ ಪೋಷಕರು ಹಾಗೂ ಖಾಸಗಿ ಶಾಲಾ ಆಡಳಿತ ಮಧ್ಯೆ ಗೊಂದಲ ಏರ್ಪಟ್ಟಿದೆ.
ವಿದ್ಯಾರ್ಥಿಗಳ ಶಾಲೆ ಶುಲ್ಕ: ಪೋಷಕರಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್
ಕೊರೋನಾ ವೈರಸ್‌ನಿಂದಾಗಿ ಶಾಲಾ ಆಡಳಿತ ಮಂಡಳಿಗಳು ಹಾಗೂ ವಿದ್ಯಾರ್ಥಿಗಳು ಪೋಷಕರು ಆದಾಯವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಆದಾಯವಿಲ್ಲದೆ ಮಕ್ಕಳ ಶಾಲಾ ಶುಲ್ಕ ಭರಿಸುವುದು ಹೇಗೆ ಎಂಬುದು ಪೋಷಕರ ಪ್ರಶ್ನೆ. ಮತ್ತೊಂದೆಡೆ ಶುಲ್ಕ ಕಟ್ಟದಿದ್ದರೆ ನಾವು ಶಿಕ್ಷಕರಿಗೆ ವೇತನ ಕೊಡುವುದು ಹೇಗೆ? ಎನ್ನುವುದು ಶಾಲಾ ಆಡಳಿತ ಮಂಡಳಿಗಳ ಮಾತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.