Hijab Row: 2018 ರಲ್ಲಿ ತಣ್ಣಗಾಗಿದ್ದ ಹಿಜಾಬ್ ವಿವಾದ, ಈಗ ತೀವ್ರ ಸ್ವರೂಪ ಪಡೆದಿದ್ಹೇಗೆ.?

Mar 18, 2022, 5:54 PM IST

ಬೆಂಗಳೂರು (ಮಾ. 18): ಕರ್ನಾಟಕ ಹೈಕೋರ್ಟ್‌ ನೀಡಿದ ಹಿಜಾಬ್ ತೀರ್ಪನ್ನು ವಿರೋಧಿಸಿ ಮುಸ್ಲಿಂ ಸಮುದಾಯದ ವ್ಯಾಪಾರಸ್ಥರು, ಉದ್ಯಮಿಗಳು ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ಸೂಚಿಸಿದರು. 

ಹಿಜಾಬ್‌ ಧಾರಣೆ ಇಸ್ಲಾಂ ಧಾರ್ಮಿಕ ಆಚರಣೆಯ ಅತ್ಯವಶ್ಯಕ ಭಾಗವಲ್ಲ ಹಿಜಾಬ್‌ ಧರಿಸಿ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸುವುದರ ಜತೆಗೆ, ಖಾಸಗಿ ಶಾಲಾ ಆಡಳಿತ ಮಂಡಳಿಗಳು ನಿರ್ಧರಿಸಿದ ಸಮವಸ್ತ್ರ ಧರಿಸಬೇಕು. ಸಮವಸ್ತ್ರ ನಿಗದಿ ಮಾಡದ ಶಾಲಾ ಕಾಲೇಜುಗಳಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಭಂಗ ಬರದಂತಹ ವಸ್ತ್ರ ಧರಿಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಊರ್ಜಿತಗೊಳಿಸಿದೆ.

2018 ರಲ್ಲೂ ಕರಾವಳಿಯಲ್ಲಿ ಹಿಜಾಬ್ ವಿವಾದ ಎದ್ದಿತ್ತು. ಆದರೆ ಅದು ಅಲ್ಲೇ ತಣ್ಣಗಾಯಿತು. ಅಂದು ತಣ್ಣಗಾಗಿದ್ದ ವಿವಾದ, ಈ ಬಾರಿ ತೀವ್ರ ಸ್ವರೂಪ ಪಡೆದಿದ್ಹೇಗೆ..? ಇಲ್ಲಿದೆ ಇಂಟರೆಸ್ಟಿಂಗ್ ವಿಚಾರ.