ಸೋಮವಾರ SSLC Exam, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅಗ್ನಿ ಪರೀಕ್ಷೆ!

Mar 26, 2022, 2:37 PM IST

ಬೆಂಗಳೂರು(ಮಾ.26): ಸೋಮವಾರದಿಂದ (ಮಾರ್ಚ್ 28) ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Examination) ಆರಂಭವಾಗಲಿದ್ದು, ಹಿಜಾಬ್ (Hijab) ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ  ಇಲ್ಲ ಎಂದು ಶಿಕ್ಷಣ ಇಲಾಖೆ (Karnataka Education Department) ಸ್ಪಷ್ಟಪಡಿಸಿದೆ. ಮಾತ್ರವಲ್ಲ ಯಾವುದೇ ಕಾರಣಕ್ಕೂ ಎರಡನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ (BC Nagesh)  ಕೂಡ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

SSLC 2022 EXAM ಹಿಜಾಬ್ ಧರಿಸಿದ್ರೆ ಪರೀಕ್ಷೆಗಿಲ್ಲ ಎಂಟ್ರಿ, ಶಿಕ್ಷಣ ಇಲಾಖೆ ಆದೇಶ 

ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ. ವಿದ್ಯಾರ್ಥಿಗಳು ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು ಡ್ರೆಸ್ ಕೋಡ್ ಪಾಲಿಸಬೇಕು ಎಂದು ಮನವಿ ಮಾಡಿದರು. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.73 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.