SSLC 2022 Exam: ಯಾವುದೇ ಉದ್ದೇಶದಿಂದ ಪರೀಕ್ಷೆಗೆ ಗೈರಾದ್ರೆ ಮತ್ತೆ ಅವಕಾಶವಿಲ್ಲ

Mar 27, 2022, 4:24 PM IST

ಬೆಂಗಳೂರು(ಮಾ.27): ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಶುರುವಾಗುತ್ತಿದ್ದು,  ಕ್ಷಣಗಣನೆ ಆರಂಭವಾಗಿದೆ. 
 ಹಿಜಾಬ್ ಧರಿಸಿ ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶವಿಲ್ಲ ಎಂದು ಈಗಾಗಲೇ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಮಾತ್ರವಲ್ಲ ಪರೀಕ್ಷೆಗೆ ಗೈರಾದ ಯಾರೇ ಆಗಲಿ  ಅಂತವರಿಗೆ ಮತ್ತೆ ಎರಡನೇ ಅವಕಾಶ  ಸಿಗುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ (BC Nagesh) ಅವರು ಸ್ಪಷ್ಟಪಡಿಸಿದ್ದಾರೆ.

SSLC 2022 Exam ಹಿಜಾಬ್ ಧರಿಸಿದ್ರೆ ಪರೀಕ್ಷೆಗಿಲ್ಲ ಎಂಟ್ರಿ, ಶಿಕ್ಷಣ ಇಲಾಖೆ ಆದೇಶ

ಹಿಜಾಬ್ (Hijab) ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಈಗಾಗಲೇ ಆಯಾ ಶಾಲೆಗಳ ಮುಖ್ಯಸ್ಥರು ಪಾಲಿಸುತ್ತಿದ್ದಾರೆ. ಶಾಲೆಯ ಕಾಂಪೌಂಡ್ ಒಳಗೆ ಹಿಜಾಬ್ ಧರಿಸಿಬರಬಹುದು. ಆದರೆ ಕೊಠಡಿಯೊಳಗೆ ಧರಿಸಲು ಅವಕಾಶವಿಲ್ಲ. ಯಾವುದೇ ಉದ್ದೇಶದಿಂದ ಪರೀಕ್ಷೆಗೆ ಗೈರು ಹಾಜರಾದವರಿಗೆ ಮರು ‍ಪರೀಕ್ಷೆ ಮಾಡುವುದಿಲ್ಲ. ಬದಲಿಗೆ ಪೂರಕ ಪರೀಕ್ಷೆ ಬರೆಯಬಹುದು  ಎಂದಿದ್ದಾರೆ.