Nov 29, 2022, 5:15 PM IST
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ನ್ಯೂ ಹಾರಿಜನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ ನಡೆಯಿತು. ಬೆಂಗಳೂರಿನ 200ಕ್ಕೂ ಹೆಚ್ಚು ಕಾಲೇಜುಗಳು ಈ ಉತ್ಸವದಲ್ಲಿ ಭಾಗವಹಿಸಿದ್ದವು. ಎರಡು ದಿನಗಳ ಕಾಲ ನಡೆದ ಈ ಉತ್ಸವವು ತಾಂಡವ ಎಂಬ ಪರಿಕಲ್ಪನೆಯಲ್ಲಿ ಮೂಡಿಬಂತು. ಸಾವಿರಾರು ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. 20 ಕಾರ್ಯಕ್ರಮಗಳು ಏಕಕಾಲಕ್ಕೆ ನಡೆದಿದ್ದು ವಿಶೇಷವಾಗಿತ್ತು.