May 10, 2022, 8:19 PM IST
ಬೆಂಗಳೂರು (ಮೇ. 10): ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಪಿಎಸ್‌ಐ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಪರೀಕ್ಷೆ ಹಗರಣ ಬೆನ್ನಲ್ಲೇ ಸರಕಾರ ಎಚ್ಚೆತ್ತುಕೊಂಡಿದೆ. ಈ ಹಿನ್ನೆಲೆಯಲ್ಲಿ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಮೇಲೆ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಚುನಾವಣಾ ಮಾದರಿಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ನೀಡಲಾಗುತ್ತಿದೆ. ಮೇ 21 ಹಾಗೂ 22 ರಂದು ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ: ಉತ್ತರ ಕನ್ನಡ: ಶಿಥಿಲಾವಸ್ಥೆಯಲ್ಲಿದೆ ಶಾಲಾ ಕೊಠಡಿಗಳು, ಆತಂಕದಲ್ಲಿ ಪೋಷಕರು..!
ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಗೋಷ್ಠಿ ನಡೆಸಿ ಮಾತಾಡಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪರೀಕ್ಷೆಗೆ ಯಾವ ಸಿದ್ಧತೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಒಂದು ಕೊಠಡಿಯಲ್ಲಿ 20 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ, ಸಿಸಿಟಿವ ಕಣ್ಗಾವಲು ಹಾಗೂ ಮೇಟಲ್ ಡಿಟೆಕ್ಟರ್‌ಗಳ ಬಳಕೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಈಗಾಗಲೇ ಭದ್ರತೆ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಪೋಲಿಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ಚರ್ಚಿಸಿ ಒಂದಷ್ಟು ಮಾಹಿತಿ ಪಡೆದಿದ್ದೇವೆ ಎಂದು ನಾಗೇಶ್ ಹೇಳಿದ್ದಾರೆ