ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆಗಳಿಗೆ ಸ್ಪಂದಿಸಿ, ಶಿಕ್ಷಣ ಸಚಿವರಿಗೆ ಸಿದ್ಧಗಂಗ ಶ್ರೀ ಮನವಿ

Jan 6, 2021, 1:35 PM IST

ಬೆಂಗಳೂರು (ಜ. 06): ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನವೀಕರಣಕ್ಕೆ ಇರುವ ನಿಯಮಗಳನ್ನು ಸಡಿಲಗೊಳಿಸಬೇಕು. ಈ ಮೂಲಕ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಿವೃತ್ತ ಜಡ್ಜ್‌ಗೆ ರಾಜ್ಯಪಾಲ ಹುದ್ದೆ, 4.5 ಕೋಟಿ ಗುಳುಂ, ಬಯಲಾಯ್ತು ಯುವರಾಜನ ಕರ್ಮಕಾಂಡ

ಕೋವಿಡ್‌-19 ಬಂದ ಮೇಲೆ ಎಲ್ಲ ಕ್ಷೇತ್ರವೂ ಸ್ಥಗಿತಗೊಂಡಿವೆ. ಹಾಗೆಯೇ ಶಿಕ್ಷಣ ಕ್ಷೇತ್ರವೂ ಸ್ಥಗಿತಗೊಂಡಿದೆ. ಇಂತಹ ಸನ್ನಿವೇಶದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಕರಿಗೆ ಸಂಬಳ ಕೊಡಲು ಕಷ್ಟಕರವಾಗಿದೆ. ಆದ್ದರಿಂದ ಸರ್ಕಾರ ಅನೇಕ ರೀತಿಯ ಪ್ಯಾಕೇಜ್‌ ಘೋಷಣೆ ಮಾಡಿರುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಸಹ ತಮಗೂ ಪ್ಯಾಕೇಜ್‌ ಘೋಷಣೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದಾರೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.