ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂಬ ವಿಚಾರ ಸದ್ದು ಮಾಡುತ್ತಿದೆ. ' ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಅಲೆ ಸೃಷ್ಟಿಸಲಿದೆ. ಇತಿಹಾಸವನನ್ನು ಪಠ್ಯದಲ್ಲಿ ಅಳವಡಿಸುವುದಲ್ಲಿ ತಪ್ಪೇನಿಲ್ಲ,ಎಂದು ವಿಧಾನಸೌಧದಲ್ಲಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ಬೆಂಗಳೂರು (ಮಾ. 18): ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂಬ ವಿಚಾರ ಸದ್ದು ಮಾಡುತ್ತಿದೆ. ' ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಅಲೆ ಸೃಷ್ಟಿಸಲಿದೆ. ಇತಿಹಾಸವನನ್ನು ಪಠ್ಯದಲ್ಲಿ ಅಳವಡಿಸುವುದಲ್ಲಿ ತಪ್ಪೇನಿಲ್ಲ, ಇದರಿಂದ ಕೆಲವರಿಗೆ ಮುಜುಗರ ಆಗಬಹುದು, ಹಾಗಂತ ನಾವು ಹಿಂದೇಟು ಹಾಕಲ್ಲ' ಎಂದು ವಿಧಾನಸೌಧದಲ್ಲಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
2022-23 ನೇ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗುವುದು ಎಂದು ಗುಜರಾತ್ ಸರ್ಕಾರ ವಿಧಾನಸಭೆಯಲ್ಲಿ ಘೋಷಿಸಿದೆ.