ರಾಜ್ಯದಲ್ಲಿ ಮೊದಲ ಹಂತದ ಮತದಾನ ಶುರು

Apr 18, 2019, 10:09 AM IST

ಜಗತ್ತಿನ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರಗಳ ಪೈಕಿ ಮುಂಚೂಣಿಯಲ್ಲಿರುವ ಭಾರತದ 17ನೇ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಿಗೆ ಗುರುವಾರ ಮತದಾನ ಶುರುವಾಗಿದೆ. ಶಾಂತಿಯುತವಾಗಿ ಮತದಾನ ನಡೆಸುವ ಸಂಬಂಧ ಚುನಾವಣಾ ಆಯೋಗವು ಸಕಲ ರೀತಿಯಲ್ಲಿ ಸಜ್ಜಾಗಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಇಡೀ ರಾಜ್ಯದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರ ಸೇರಿದಂತೆ 14 ಲೋಕಸಭಾ ಕ್ಷೇತ್ರದಲ್ಲಿ 2.67 ಕೋಟಿ ಮತದಾರರು 241 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ.