ವಾಕ್ಸಮರಕ್ಕೆ ಸೀಮಿತವಾಗಿದ್ದ ಮಂಡ್ಯ ಚುನಾವಣಾ ಕಣ ಈಗ ಕೈ-ಕೈ ಮಿಲಾಯಿಸುವ ಮಟ್ಟಕ್ಕೆ ಹೋಗಿದೆ. ಸುಮಲತಾ ಅಂಬರೀಷ್ ಬೆಂಬಲಿಗರು ಮತ್ತು ಜೆಡಿಎಸ್ ಬೆಂಬಲಿಗರು ಪರಸ್ಪರ ಬಡಿದಾಡಿಕೊಂಡಿದ್ದು, ಮೂವರು ಜೆಡಿಎಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತರನ್ನು ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರು ನನ್ನ ಕುಟುಂಬ ಇದ್ದ ಹಾಗೇ, ಅವರ ಮೇಲೆ ನಡೆಸಿದ ಹಲ್ಲೆ ನನ್ನ ಮೇಲೆ ಹಲ್ಲೆ ನಡೆಸಿದಂತೆ, ಯಾವುದೇ ಕಾರಣಕ್ಕೂ ಸುಮ್ಮನಿರುವ ಪ್ರಶ್ನೆಯಿಲ್ಲ ಎಂಬ ಸಂದೇಶವನ್ನು ನಿಖಿಲ್ ರವಾನಿಸಿದ್ದಾರೆ.