
ಪುರಿ ಜಗನ್ನಾಥ್-ವಿಜಯ್ ಸೇತುಪತಿ ಚಿತ್ರಕ್ಕೆ ಸಂಯುಕ್ತ ಮೆನನ್ ಎಂಟ್ರಿ..! ಡ್ಯಾಶಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹಾಗೂ ವಿಜಯ್ ಸೇತುಪತಿ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ ಸಿದ್ಧವಾಗುತ್ತಿದೆ. ಇದೀಗ ಆ ಸಿನಿಮಾದಲ್ಲಿ ಪ್ರತಿಭಾನ್ವಿತ ನಟಿ ಸಂಯುಕ್ತ ಮೆನನ್ ಎಂಟ್ರಿ ಕೊಟ್ಟಿದ್ದಾರೆ.
ಪುರಿ ಕನೆಕ್ಟ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಟಬು, ದುನಿಯಾ ವಿಜಯ್ ಕುಮಾರ್ ನಟಿಸುವುದು ಖಚಿತವಾಗಿದೆ. ಇದೀಗ ನಟಿ ಸಂಯುಕ್ತ ಮೆನನ್ ರನ್ನು ಚಿತ್ರತಂಡ ಸ್ವಾಗತಿಸಿದೆ. ಮೊದಲ ಹಂತದ ಚಿತ್ರೀಕರಣವನ್ನು ಚಿತ್ರತಂಡ ಹೈದ್ರಾಬಾದ್ ಹಾಗೂ ಚೆನ್ನೈನಲ್ಲಿ ಮಾಡಲು ಸಿದ್ಧವಾಗಿದ್ದು, ಜೂನ್ ಕೊನೆಯ ವಾರದಲ್ಲಿ ರೆಗ್ಯೂಲರ್ ಚಿತ್ರೀಕರಣ ಪ್ರಾರಂಭವಾಗಲಿದೆ.