ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಯುವಾ ಬ್ರಿಗೇಡ್ ವತಿಯಿಂದ ಕಾವೇರಿ ಮಾತೆಗೆ ವಿಶೇಷ ಆರತಿ ಸಲ್ಲಿಸಲಾಯಿತು.
ತಲಕಾವೇರಿಯಲ್ಲಿ ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಮಾಡಲಾಯಿತು. ಭಾರತಾಂಬೆಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿನಯ್ ಗೂರೂಜಿ ಕಾರ್ಯಕ್ರಮ ಉದ್ಘಾಟಿಸಿದರು. ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ, ಚಂದ್ರವನ ಆಶ್ರಮದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಹಡಗಲಿ ಮಠದ ಶ್ರೀ ಅಭಿನವ ಹಾಲ ಸ್ವಾಮೀಜಿ ಹಾಗೂ ವೇದ ಬ್ರಹ್ಮ ಭಾನುಪ್ರಕಾಶ್ ಶರ್ಮಾ ಸೇರಿದಂತೆ ಹಲವರು ಭಾಗಿಯಾಗಿದ್ದರು.