Apr 10, 2024, 5:01 PM IST
ಭಾರತದಲ್ಲಿ ಸಾವು ಮತ್ತು ಅಂಗವೈಕಲ್ಯಕ್ಕೆ ಪ್ರಮುಖ ಕಾರಣಗಳಲ್ಲಿ ಸ್ಟ್ರೋಕ್ ಕೂಡ ಒಂದಾಗಿದೆ. ವರ್ಷದಲ್ಲಿ ಬರೋಬ್ಬರಿ1.8 ದಶಲಕ್ಷಕ್ಕೂ ಹೆಚ್ಚು ಜನರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಪಾರ್ಶ್ವವಾಯು ಅಥವಾ ಸ್ಟ್ರೋಕ್ ಪ್ರಕರಣಗಳು ಹೆಚ್ಚುತ್ತಲಿವೆ. ಅದರಲ್ಲೂ ವಯಸ್ಸಾದವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಬ್ರೈನ್ ಸ್ಟ್ರೋಕ್‌ನಿಂದ ಮೆದುಳಿನ ರಕ್ತ ಸಂಚಾರದಲ್ಲಿ ತೊಂದರೆಯಾಗುತ್ತದೆ. ಮೆದುಳಿನಲ್ಲಿ ನರವನ್ನು ನಿರ್ಬಂಧಿಸಿದಾಗ, ಬ್ರೈನ್ ಸ್ಟ್ರೋಕ್ ಉಂಟಾಗುತ್ತೆ. ಇದು ಮಾರಣಾಂತಿಕ ಸ್ಥಿತಿಯಾಗಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ಸಾವು ಸಂಭವಿಸಬಹುದು. ಈ ಬಗ್ಗೆ ಮಣಿಪಾಲ್ ಆಸ್ಪತ್ರೆಯ ನರರೋಗ ತಜ್ಞ.ಡಾ.ಜಯಚಂದ್ರನ್ ಮಾಹಿತಿ ನೀಡಿದ್ದಾರೆ.