ದೆಹಲಿಯಲ್ಲಿ ಕೊರೋನಾ ಸ್ಫೋಟ: ರಾಮಲೀಲಾ ಮೈದಾನಲ್ಲಿ ಬೃಹತ್ ಕೋವಿಡ್ ಸೆಂಟರ್!

ದೆಹಲಿಯಲ್ಲಿ ಕೊರೋನಾ ಸ್ಫೋಟ: ರಾಮಲೀಲಾ ಮೈದಾನಲ್ಲಿ ಬೃಹತ್ ಕೋವಿಡ್ ಸೆಂಟರ್!

Published : Apr 29, 2021, 05:33 PM ISTUpdated : Apr 29, 2021, 05:34 PM IST

ದೆಹಲಿಯ ರಾಮ್‌ಲೀಲಾ ಮೈದಾನ ಐತಿಹಾಸಿಕ ಹಿನ್ನೆಲೆ ಇರುವ ಮೈದಾನ. ಈ ಮೈದಾನ ಹತ್ತಾರು ಹೋರಾಟಗಳಿಗೆ ಸಾಕ್ಷಿಯಾಗಿದ್ದ ಮೈದಾನ. ಆದರೀಗ ಇಂದು ಇದು ದೆಹಲಿಯಲ್ಲಿ ತಲೆದೋರಿರುವ ಹೆಲ್ತ್‌ ಎಮರ್ಜೆನ್ಸಿ ಸಂದರ್ಭದಲ್ಲಿ ಕೋವಿಡ್‌ ಸೆಂಟರ್‌ ಆಗಿ ಮಾರ್ಪಾಡಾಗಲಿದೆ.

ನವದೆಹಲಿ(ಏ.29) ದೆಹಲಿಯ ರಾಮ್‌ಲೀಲಾ ಮೈದಾನ ಐತಿಹಾಸಿಕ ಹಿನ್ನೆಲೆ ಇರುವ ಮೈದಾನ. ಈ ಮೈದಾನ ಹತ್ತಾರು ಹೋರಾಟಗಳಿಗೆ ಸಾಕ್ಷಿಯಾಗಿದ್ದ ಮೈದಾನ. ಆದರೀಗ ಇಂದು ಇದು ದೆಹಲಿಯಲ್ಲಿ ತಲೆದೋರಿರುವ ಹೆಲ್ತ್‌ ಎಮರ್ಜೆನ್ಸಿ ಸಂದರ್ಭದಲ್ಲಿ ಕೋವಿಡ್‌ ಸೆಂಟರ್‌ ಆಗಿ ಮಾರ್ಪಾಡಾಗಲಿದೆ.

1000 ಐಸಿಯು ಬೆಡ್‌ಗಳ ಕೊವಿಡ್ ಸೆಂಟರ್ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಿರ್ಮಾಣವಾಗಲಿದ್ದು, ಇದರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಮೇ 10 ರ ಒಳಗಾಗಿ 1000 ಹಾಸಿಗೆಯ ಕೋವಿಡ್ ಸೆಂಟರ್ ಬಳಕೆಗೆ ಸಿದ್ದಗೊಳ್ಳಲಿದೆ. ಕೇಂದ್ರ ಸರ್ಕಾರ ಎಲ್‌ಎನ್‌ಜೆಪಿ ಆಸ್ಪತ್ರೆಯ ನಿಗಾದಡಿ 500, ಜಿಟಿಬಿ ಆಸ್ಪತ್ರೆಯ ನಿಗಾದಡಿ 500 ಐಸಿಯು ಬೆಡ್ ವ್ಯವಸ್ಥೆ ಮಾಡಲಾಗುತ್ತದೆ.

ಸದ್ಯ ದೆಹಲಿ ಸರ್ಕಾರಕ್ಕೂ ಕೊರೋನಾ ಬಹುದೊಡ್ಡ ತಲೆ ನೋವಾಗಿದ್ದು, ಮೇ ತಿಂಗಳಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಮಲೀಲಾ ಮೈದಾನದಲ್ಲಿ ಭರದ ಸಿದ್ದತೆ ಆರಂಭಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!