ಆಪ್‌ಗೆ ಮತದಾರನ ಜೈ, ವಿಪಕ್ಷಕ್ಕೆ ಬಿಜೆಪಿ ಸೈ: ಚುನಾವಣೋತ್ತರ ಸಮೀಕ್ಷೆ!

Feb 8, 2020, 8:52 PM IST

ನವದೆಹಲಿ(ಫೆ.08): ದೆಹಲಿ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮತದಾರರ ನಿರಾಸ ಪ್ರಕ್ರಿಯೆ ನಡುವೆಯೇ ರಾಜಕೀಯ ಪಕ್ಷಗಳು ಫೆ.11(ಮಂಗಳವಾರ)ರ ಚುನಾವಣಾ ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿವೆ. ಇನ್ನು ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೇ ಚುನಾವಣೋತ್ತರ ಸಮೀಕ್ಷೆಗಳ ಭರಾಟೆ ಶುರುವಾಗಿದ್ದು, ಪ್ರಮುಖ ಸುದ್ದಿವಾಹಿನಿಗಳು ಹಾಗೂ ಸಂಸ್ಥೆಗಳು ದೆಹಲಿ ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸಿವೆ. ಎಲ್ಲಾ ಪ್ರಮುಖ ಗಳಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರ ಪಡೆಯಲಿದೆ ಎಂದು ಅಂದಾಜಿಸಲಾಗಿದ್ದು, ಬಿಜೆಪಿ ಪ್ರಮುಖ ವಿರೋಧ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಹೇಳಲಾಗಿದೆ.