Assembly Elections 2022: ಉತ್ತರವನ್ನು ಗೆದ್ದು ಮತ್ತೆ ದೇಶ ಗೆಲ್ತಾರಾ ನರೇಂದ್ರ ಮೋದಿ?

Jan 9, 2022, 12:53 PM IST

ಬೆಂಗಳೂರು (ಜ.9): ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ (Election Commission) ದಿನಾಂಕ ಪ್ರಕಟ ಮಾಡಿದೆ. ದೇಶದ ರಾಜಕೀಯ ಭವಿಷ್ಯವನ್ನು ನಿರ್ಧಾರ ಮಾಡುವ ಉತ್ತರ ಪ್ರದೇಶ (Uttar Pradesh) ಸೇರಿದಂತೆ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ಪಂಜಾಬ್ (Punjab), ಉತ್ತಾರಖಂಡ (Uttarakhand), ಮಣಿಪುರ (Manipur) ಹಾಗೂ ದಕ್ಷಿಣದ ಗೋವಾ (Goa)ರಾಜ್ಯಗಳಲ್ಲಿ ಫೆಬ್ರವರ 10 ರಿಂದ ಮಾರ್ಚ್ 7ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಯೋಗಿ ಆದಿತ್ಯನಾಥ್ (Yogi Adityanath) ಅಥವಾ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akilesh Yadav), ದೇಶದ ಅತೀದೊಡ್ಡ ರಾಜ್ಯ ಉತ್ತರ ಪ್ರದೇಶದ ಮುಂದಿನ ಅಧಿಪತಿ ಯಾರು ಎನ್ನುವುದು ಇನ್ನು ಕೆಲವೇ ತಿಂಗಳಲ್ಲಿ ಗೊತ್ತಾಗಲಿದೆ.

Assembly Election 2022: ಫೆ. 10 ರಿಂದ ಮಾರ್ಚ್ 7ರವರೆಗೆ ಪಂಚರಾಜ್ಯ ಚುನಾವಣೆ, ರ‍್ಯಾಲಿ, ಪಾದಯಾತ್ರೆ, ರೋಡ್‌ಶೋ ಎಲ್ಲವೂ ಬಂದ್!
2024ರಲ್ಲಿ ಮೋದಿ ಮತ್ತೆ ಪ್ರಧಾನಿಯಾಗುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಫಲಿತಾಂಶವೇ ನಿರ್ಣಾಯಕವಾಗಲಿದೆ. 403 ಮತಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವೇ ನೇರ ಎದುರಾಳಿ. ಬಹುಜನ ಸಮಾಜ ಪಾರ್ಟಿ ಹಾಗೂ ಕಾಂಗ್ರೆಸ್ ನಿಂದ ದೊಡ್ಡ ಮಟ್ಟದ ಪೈಪೋಟಿ ಕಡಿಮೆ. ಇನ್ನು ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಕನಿಷ್ಠ 3 ರಾಜ್ಯಗಳಲ್ಲಿ ಗೆಲುವು ಸಾಧಿಸಬೇಕು ಎನ್ನುವುದು ಕಾಂಗ್ರೆಸ್ ನ ಇಚ್ಛೆ. ಇನ್ನೊಂದೆಡೆ ಬಿಜೆಪಿ ಈಗ ಇರುವ ರಾಜ್ಯಗಳನ್ನು ಉಳಿಸಿಕೊಳ್ಳುವುದರೊಂದಿಗೆ ಪಂಜಾಬ್ ಮೇಲೆ ಅಧಿಕಾರ ಸ್ಥಾಪನೆ ಮಾಡುವ ಕನಸು ಕಾಣುತ್ತಿದೆ.