BTS 2021: Start Up ಕುರಿತು ವರ್ಚುವಲ್‌ ಸಭೆ : ಸಚಿವ ಅಶ್ವತ್ಥ್ ನಾರಾಯಾಣ್‌ ನೇತೃತ್ವ!

BTS 2021: Start Up ಕುರಿತು ವರ್ಚುವಲ್‌ ಸಭೆ : ಸಚಿವ ಅಶ್ವತ್ಥ್ ನಾರಾಯಾಣ್‌ ನೇತೃತ್ವ!

Suvarna News   | Asianet News
Published : Nov 18, 2021, 04:59 PM IST

*ನವೆಂಬರ್ 17ರಿಂದ ಆರಂಭವಾದ ಟೆಕ್‌ ಶೃಂಗ
*ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಚಾಲನೆ
*ಇಂದು (ನ.18)Start Up ಖುರಿತು ವರ್ಚುವಲ್‌ ಸಭೆ
*ಐಟಿ-ಬಿಟಿ ಸಚಿವ ಅಶ್ವತ್ಥ್‌ ನಾರಾಯಣ್‌ ನೇತೃತ್ವ

ಬೆಂಗಳೂರು(ನ.18): ಬಹು ನಿರೀಕ್ಷಿತ ಬೆಂಗಳೂರು ತಂತ್ರಜ್ಞಾನ ಶೃಂಗ (Bengaluru Tech Summit)ದ 24ನೇ ವರ್ಷದ ಸಮಾವೇಶ ನವೆಂಬರ್ 17ರಿಂದ ಆರಂಭವಾಗಿದೆ. ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು (M. Venkaiah Naidu) ಚಾಲನೆ ನೀಡಿದ್ದಾರೆ. ಟೆಕ್‌ ಸಮ್ಮಿಟ್‌ನ ಎರಡನೇ ದಿನವಾದ ಇಂದು (ನ. 18) ಐಟಿ ಬಿಟಿ (IT-BT) ಸಚಿವ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ವರ್ಚುವಲ್‌ (virtual) ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ್ಟಾರ್ಟಪ್‌ಗಳ (ಹೊಸ ಉದ್ಯಮ -Start Up) ಕುರಿತು ಚರ್ಚೆ ನಡೆದಿದ್ದು 30 ದೇಶಗಳು ಭಾಗಿಯಾಗಿವೆ.  ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು ಹೊಸ ಉದ್ಯಮಗಳಿಗೆ ಇರುವ ಅವಕಾಶಗಳ ಬಗ್ಗೆ ಮಾತನಾಡಿದ್ದರೆ.

BTS 2021; ಸಂಶೋಧನೆಗಳಿಂದ ಕೃಷಿ ಸುಧಾರಣೆಯಾಗಬೇಕು; ವೆಂಕಯ್ಯ ನಾಯ್ಡು

‘ಡ್ರೈವಿಂಗ್‌ ದಿ ನೆಕ್ಸ್ಟ್‌’ ಘೋಷ ವಾಕ್ಯದಡಿ ನಡೆಯುತಿರುವ ಬಿಟಿಎಸ್‌-2021ರಲ್ಲಿ (BTS 2021) 30ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. ಯುಎಇ (UAE), ಐರೋಪ್ಯ ಒಕ್ಕೂಟ, ವಿಯೆಟ್ನಾಂ ಮತ್ತು ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದು, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನಟ್‌ ಮತ್ತು ಆಸ್ಪ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಸೇರಿದಂತೆ ಹಲವು ಗಣ್ಯರು ವರ್ಚುವಲ್ ರೂಪದಲ್ಲಿ ಭಾಗವಹಿಸಲಿದ್ದಾರೆ. ಜಾಗತಿಕ ಮಟ್ಟದ 300ಕ್ಕೂ ಹೆಚ್ಚು ಕಂಪನಿಗಳು ಮತ್ತು 5 ಸಾವಿರಕ್ಕೂ ಹೆಚ್ಚು ನವೋದ್ಯಮಗಳು, ವಾಣಿಜ್ಯ ವಲಯದ 20 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ವರ್ಚುವಲ್ ರೂಪದಲ್ಲಿ 5 ಲಕ್ಷಕ್ಕೂ ಹೆಚ್ಚು ಆಸಕ್ತರು ಈ ಶೃಂಗದಲ್ಲಿ ಭಾಗವಹಿಸಲಿದ್ದಾರೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more