ಇದು ನನ್ನ ಕೊನೆಯ ಚುನಾವಣೆ, ರಾಜಕೀಯ ನಿವೃತ್ತಿ ಘೋಷಿಸಿದ ನಿತೀಶ್ ಕುಮಾರ್!

Nov 5, 2020, 6:08 PM IST

ಬಿಹಾರ(ನ.05): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಪುರ್ನಿಯಾ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್, 2020ರ ವಿಧಾನಸಭೆ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದೆ. ಈ ಅವಧಿ ಬಳಿಕ ನಾನು ರಾಜಕೀಯ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. 

ಬಿಹಾರ ಚುನಾವಣೆಯ ಪ್ರಚಾರದ ಅಂತಿಮ ದಿನ ನಿತೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಿಸಿರುವುದು ಇದೀಗ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ.