ಬಿಹಾರದ ಸಿಎಂ ಆಗಿ ನಿತೀಶ್‌, ಡಿಸಿಎಂ ಆಗಿ ತೇಜಸ್ವಿ ಯಾದವ್‌ ಇಂದು ಶಪಥ

Aug 10, 2022, 10:17 AM IST

ಕಳೆದ ಕೆಲವು ದಿನಗಳಿಂದ ಬಿಜೆಪಿ ಬಗ್ಗೆ ಒಳಗೊಳಗೇ ಕುದಿಯುತ್ತಿದ್ದ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಬಿಹಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಜತೆಗಿನ ಸ್ನೇಹ ಮುರಿದುಕೊಂಡು ತಮ್ಮ ಹಳೆಯ ಮಿತ್ರರಾದ ತೇಜಸ್ವಿ ಯಾದವ್‌ ನೇತೃತ್ವದ ಆರ್‌ಜೆಡಿ ಹಾಗೂ ಕಾಂಗ್ರೆಸ್‌ ಕೈ ಹಿಡಿದಿದ್ದಾರೆ.

News Hour:ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ, ಸಂಚಲನ ಸೃಷ್ಟಿಸಿದ ಕಾಂಗ್ರೆಸ್ ಟ್ವೀಟ್!

ರಾಜೀನಾಮೆ ಸಲ್ಲಿಸಿದ ಬಳಿಕ ತೇಜಸ್ವಿ ಯಾದವ್‌ ಜತೆಗೂಡಿ ರಾಜ್ಯಪಾಲ ಫಗು ಚವಾಣ್‌ ಅವರನ್ನು ಭೇಟಿ ಮಾಡಿದ ನಿತೀಶ್‌, 164 ಶಾಸಕರ ಬೆಂಬಲ ಹೊಂದಿರುವ ಪತ್ರ ಸಲ್ಲಿಸಿ ಹೊಸ ಸರ್ಕಾರ ರಚನೆಗೆ ನಿತೀಶ್‌ ಹಕ್ಕು ಮಂಡಿಸಿದ್ದಾರೆ. ಅದರ ಬೆನ್ನಲ್ಲೇ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ನಿತೀಶ್‌ ಮುಖ್ಯಮಂತ್ರಿಯಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.