ಪ್ರಧಾನಿ ಮೋದಿ ನಾಯಿ ರೀತಿ ಸಾಯ್ತಾರೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ ಶೇಖ್‌ ಹುಸೇನ್‌!

ಪ್ರಧಾನಿ ಮೋದಿ ನಾಯಿ ರೀತಿ ಸಾಯ್ತಾರೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ ಶೇಖ್‌ ಹುಸೇನ್‌!

Published : Jun 15, 2022, 09:25 PM IST

"ಪ್ರಧಾನಿ ಮೋದಿಗೆ ನಾಯಿ ರೀತಿ ಸಾವು ಬರುತ್ತೆ" ರಾಹುಲ್‌ ಗಾಂಧಿ ಬೆಂಬಲಿಸುವ ಭರದಲ್ಲಿ ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕ ಶೇಖ್ ಹುಸೇನ್‌  ನಾಲಿಗೆ ಹರಿಬಿಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ಶೇಖ್ ಹುಸೇನ್‌ನನ್ನು ಬಂಧಿಸುವಂತೆ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರು (ಜೂನ್ 15): ರಾಹುಲ್ ಗಾಂಧಿ (Rahul Gandhi) ಅವರನ್ನು ಬೆಂಬಲಿಸುವ ಭರದಲ್ಲಿ ಮಹಾರಾಷ್ಟ್ರದ (Maharashtra) ಕಾಂಗ್ರೆಸ್ ಶಾಸಕ ಶೇಖ್ ಹುಸೇನ್ (Sheikh Hussain), ಪ್ರಧಾನಿ ಮೋದಿ (Prime Minister Modi) ನಾಯಿ ರೀತಿ ಸಾಯ್ತಾರೆ ಎಂದು ಹೇಳುವ ಮೂಲಕ ಉದ್ಧಟತನ ಮೆರೆದಿದ್ದರು. ಇದರ ಬೆನ್ನಲ್ಲಿಯೇ ಅವರನ್ನು ಬಂಧನ ಮಾಡುವಂತೆ ಬಿಜೆಪಿ ಆಗ್ರಹಿಸಿದೆ.

ರಾಹುಲ್ ಗಾಂಧಿಯನ್ನು ಮೆಚ್ಚಿಸುವ ಭರದಲ್ಲಿ ಶೇಖ್ ಹುಸೇನ್, ಪ್ರಧಾನಿ ಮೋದಿ ಕುರಿತಾಗಿ ವಿವಾದತ್ಮಕವಾಗಿ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ನಗರ ಅಧ್ಯಕ್ಷ ಶೇಖ್ ಹುಸೇನ್ ವಿರುದ್ಧ ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ ಮುಂದೆ ಬಂದು ದ್ವೇಷದ ವಿಷವನ್ನು ತಡೆಯುವ ಅಗತ್ಯವಿದೆ: ನಾಸಿರುದ್ದೀನ್ ಶಾ

ನನ್ನ ಹೇಳಿಕೆಗೆ ನೋಟಿಸ್ ಕೊಡುವ ಸಾಧ್ಯತೆ ಇದೆ. ಇದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಹಿಂದೆಯೂ ಹೆದರಿಲ್ಲ. ಮುಂದೆಯೂ ಯಾರಿಗೂ ಹೆದರೋದಿಲ್ಲ. ನನ್ನ ಹೋರಾಟ ನಿಲ್ಲಿಸೋದಿಲ್ಲ ಎಂದು ಶೇಖ್ ಹುಸೇನ್ ಹೇಳಿದ್ದಾರೆ. ಮಂಗಳವಾರ ನಾಗ್ಪುರದ ಗಿಟ್ಟಿಖಾದನ್ ಠಾಣೆಯಲ್ಲಿ ಎಫ್‌ಐಆರ್ ಅನ್ನು ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು) ಮತ್ತು 504 ಐಪಿಸಿ (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದಾಖಲಿಸಲಾಗಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more