Jun 3, 2023, 3:00 PM IST
ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ ಏರುತ್ತಿದೆ. 280ಕ್ಕೂ ಮಂದಿ ಬಲಿಯಾಗಿದ್ದು 650ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಎರಡು ಪ್ಯಾಸೆಂಜರ್ ರೈಲು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತ ದೇಶವನ್ನೆ ಬೆಚ್ಚಿಬೀಳಿಸಿದೆ. ಈ ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ. ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ. "ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ" ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇದನ್ನೂ ವೀಕ್ಷಿಸಿ: ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ಮೋದಿ ಸಭೆ, ಘಟನಾ ಸ್ಥಳಕ್ಕೆ ಸಂತೋಷ್ ಲಾಡ್ ಭೇಟಿ