ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ಸಿಗರು ದೇಶದ ಹಲವಡೆ ಪ್ರತಿಭಟನೆ ನಡೆಸಿದ್ದರು. ಇಡಿ ನೋಟಿಸ್ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 11.10ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾದರು. ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು.
ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.
ನವದೆಹಲಿ, (ಜೂನ್.14): ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಒಂದೆಡೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಮತ್ತೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೈಡ್ರಾಮಾ ಆಗಿತ್ತು,
ರಾಹುಲ್ ವಿಚಾರಣೆ ವಿರುದ್ಧ ಕಾಂಗ್ರೆಸ್ ಕಿಚ್ಚು: ದಿಲ್ಲಿ ಸೇರಿ ದೇಶದ ವಿವಿಧ ಕಡೆ ಪ್ರತಿಭಟನೆ
ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ಸಿಗರು ದೇಶದ ಹಲವಡೆ ಪ್ರತಿಭಟನೆ ನಡೆಸಿದ್ದರು. ಇಡಿ ನೋಟಿಸ್ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 11.10ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾದರು. ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.