Jan 21, 2022, 4:38 PM IST
ಬೆಂಗಳೂರು (ಜ. 21): ದೆಹಲಿಯಲ್ಲಿ (New Delhi) ಸೋಂಕು ಇಳಿಕೆಯಾದ ಹಿನ್ನಲೆಯಲ್ಲಿ ವೀಕೆಂಡ್ ಲಾಕ್‌ಡೌನನ್ನು (Weekend Lockdown) ವಾಪಸ್ ಪಡೆಯಲಾಗಿದೆ. ಸದ್ಯ ಇರುವ ನಿರ್ಬಂಧಗಳನ್ನು ವಾಪಸ್ ಪಡೆಯಲಾಗಿದೆ. ಖಾಸಗಿ ಕಚೇರಿಯಲ್ಲಿ ಶೇ. 50 ರಷ್ಟು ಹಾಜರಾತಿಗೆ ಅವಕಾಶ ಕೊಡಲಾಗಿದೆ. ಇದರಿಂದ ದೆಹಲಿಗರು ನಿರಾಳರಾಗಿದ್ದಾರೆ.
ಇನ್ನು ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂಮತ್ತು ರಾತ್ರಿ ಕರ್ಫ್ಯೂ ಸಡಿಲಿಕೆ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿದಂತೆ ಇತರೆ ಸಚಿವರು, ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದಾರೆ.