ಪ್ರಚೋದನಕಾರಿ ಭಾಷಣ ಆರೋಪ: ಡಾ. ಕಫೀಲ್ ಖಾನ್ ಬಂಧನ!

Jan 30, 2020, 5:19 PM IST

ಲಕ್ನೋ(ಜ.30): ಕಳೆದ ಡಿಸೆಂಬರ್ 12 ರಂದು ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ಆರೋಪದ ಮೇರೆಗೆ ಡಾ. ಕಫೀಲ್ ಖಾನ್ ಅವರನ್ನು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಮುಂಬೈಯಲ್ಲಿ ಬಂಧಿಸಿದೆ. ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಡಾ. ಕಫೀಲ್ ಖಾನ್ ವಿರುದ್ಧ ಡಿಸೆಂಬರ್ 13 ರಂದು ಅಲಿಘರ್‌ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಆಲಿಘರ್ ವಿಶ್ವವಿದ್ಯಾಲಯದಲ್ಲಿ ಸುಮಾರು 600 ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಡಾ. ಕಫೀಲ್ ಖಾನ್, ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..