Oct 10, 2021, 9:12 AM IST
ಬೆಂಗಳೂರು (ಅ. 10): ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಮುಂದುವರೆದಿದ್ದು, ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ(ಬಿಟಿಪಿಎಸ್)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿವೆ. ಸದ್ಯ ಒಂದು ಘಟಕದಿಂದ ಮಾತ್ರ ವಿದ್ಯುತ್ ಉತ್ಪಾದನೆ ಮುಂದುವರಿದಿದೆ.
ಬೆಂಗಳೂರು ಉಸ್ತುವಾರಿ ಜಟಾಪಟಿ ಸಿಎಂ ಬೊಮ್ಮಾಯಿ ಬ್ರೇಕ್!
ದೇಶದಲ್ಲಿಯೂ ಕಲ್ಲಿದ್ದಲು ಕೊರತೆ ಮುಂದುವರೆದಿದೆ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೆಲೆ ದಿಡೀರ್ ಏರಿಕೆಯಾಗಿದೆ. 4 ದಿನಗಳಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸ್ಪಷ್ಟನೆ ನೀಡಿದ್ಧಾರೆ.