ಸೋನಿಯಾ ರಾಜಕೀಯ ಕಾರ್ಯದರ್ಶಿಗೆ ಇಡಿ ಶಾಕ್!

Jun 27, 2020, 2:18 PM IST

ನವದೆಹಲಿ(ಜೂ.27) ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ಅಹ್ಮದ್ ಪಟೇಲ್ ಮನೆ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಅಹ್ಮದ್ ಪಟೇಲ್ ಅವರ ದೆಹಲಿಯಲ್ಲಿನ ನಿವಾಸದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಪ್ರಕರಣ ಸಂಬಂಧ ಹೇಳಿಕೆ ಪಡೆದುಕೊಂಡಿದ್ದಾರೆ.

ಇದಕ್ಕೂ ಮುಂಚೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಆದರೆ, ತಾವೊಬ್ಬ ಹಿರಿಯ ನಾಗರಿಕರಾಗಿದ್ದು,ಕೋವಿಡ್-19 ಸಾಂಕ್ರಾಮಿಕ ರೋಗದ ಮಾರ್ಗಸೂಚಿ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುವುದಕ್ಕೆ ಆಗಲ್ಲ ಎಂದು ಅಹ್ಮದ್ ಪಟೇಲ್ ಹೇಳಿದ್ದರು.