ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು 'ಆಪರೇಶನ್ ಗಂಗಾ' ಕಾರ್ಯಚರಣೆ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ. 'ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ. ಇಂತಹ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಲ್ಲರ ಸುರಕ್ಷತೆಗಾಗಿ ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ: ಪ್ರಧಾನಿ ಮೋದಿ
ನವದೆಹಲಿ (ಫೆ. 27): ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು 'ಆಪರೇಶನ್ ಗಂಗಾ' ಕಾರ್ಯಚರಣೆ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ. 'ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ. ಇಂತಹ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಲ್ಲರ ಸುರಕ್ಷತೆಗಾಗಿ ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
'ಉಕ್ರೇನ್‌ನಲ್ಲಿ ನಮ್ಮ ದೇಶದ ಮಗ-ಮಗಳು ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆ ತರುವುದು ನಮ್ಮ ಮೊದಲ ಆದ್ಯತೆ' ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.