ಗ್ಯಾನವಾಪಿ ಮಸೀದಿ- ಮಂದಿರ ವಿವಾದ: ಮೇ 20 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

May 19, 2022, 12:23 PM IST

ಲಕ್ನೋ (ಮೇ.19):  ಗ್ಯಾನವಾಪಿ ಮಸೀದಿಯ (Gyanvapi mosque )ವಿಡಿಯೋ ಚಿತ್ರೀಕರಣಕ್ಕೆ ತಡೆ ಕೋರಿ, ಮಸೀದಿ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಇಂದು ಕೈಗೆತ್ತಿಕೊಂಡಿತ್ತು. ಕಾರಣಾಂತರದಿಂದ ವಿಚಾರಣೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ. 

News Hour ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ, ಸ್ಥಳ ಸೀಲ್‌ಡೌನ್‌ಗೆ ಕೋರ್ಟ್ ಆದೇಶ

ಮಂಗಳವಾರ ನಡೆದ ವಿಚಾರಣೆ ವೇಳೆ ಗ್ಯಾನವಾಪಿ ಮಸೀದಿಯೊಳಗೆ ಪತ್ತೆಯಾಗಿದೆ ಎನ್ನಲಾದ ಶಿವಲಿಂಗವನ್ನು ರಕ್ಷಿಸುವಂತೆ ಕೋರ್ಟ್ ಆದೇಶ ಹೊರಡಿಸಿತ್ತು. ಅಲ್ಲದೆ ಸಮೀಕ್ಷೆ ಕುರಿತ ಆದೇಶ ಮತ್ತು ಇಡೀ ಪ್ರಕ್ರಿಯೆಗೆ ತಡೆ ನೀಡಲು ನಿರಾಕರಿಸಿತ್ತು. ಜೊತೆಗೆ ಹಿಂದೂ ಅರ್ಜಿದಾರರ ಪರ ವಕೀಲರು ಅನಾರೋಗ್ಯದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗದ ಕಾರಣ, ಅರ್ಜಿಯ ವಿಚಾರಣೆಯನ್ನು ಇಂದು (ಮೇ.19) ಮುಂದೂಡುವುದಾಗಿ ಹೇಳಿತ್ತು. ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.