ಹಿಜಾಬ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ!

ಹಿಜಾಬ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ!

Published : Mar 28, 2022, 12:48 PM IST

ಹಿಜಾಬ್ ಕುರಿತಾಗಿ ಕರ್ನಾಟಕ ಹೈಕೋರ್ಟ್ ತೀರ್ಪು

ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯಮಂಡಳಿ

ಮೊಹಮದ್ ರಹೀಂ, ಮುನೀಸಾ ಬುಸ್ರಾ, ಜೆಲಿಸಾ ಸುಲ್ತಾನಾ ಎನ್ನುವವರಿಂದ ಅರ್ಜಿ

ಬೆಂಗಳೂರು (ಮಾ. 28): ಇಸ್ಲಾಂನಲ್ಲಿ (Islam) ಹಿಜಾಬ್ (Hijab) ಹೆಣ್ಣುಮಕ್ಕಳಿಗೆ ಅವಿಭಾಜ್ಯ ಅಂಗವಲ್ಲ. ಆ ಕಾರಣಕ್ಕಾಗಿ ಶಾಲೆಗೆ ಸರ್ಕಾರ ಸೂಚಿಸಿರುವ ಸಮವಸ್ತ್ರವೇ ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ನೀಡಿದ ತೀರ್ಪಿನ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ (All India Muslim Personal Law Board) ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಮೊಹಮದ್ ರಹೀಂ, ಮುನೀಸಾ ಬುಸ್ರಾ, ಜೆಲಿಸಾ ಸುಲ್ತಾನಾ ಎನ್ನುವವರಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿರುವ 2ನೇ ಅರ್ಜಿ ಇದಾಗಿದೆ. ತೀರ್ಪಿನಲ್ಲಿ ಕುರಾನ್ ಬಗ್ಗೆ ತಪ್ಪಾದಾ ವ್ಯಾಖ್ಯಾನ ಮಾಡಲಾಗಿದೆ. ಹದೀಸ್ ಬಗ್ಗೆ ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಇಸ್ಲಾಮಿಕ್ ಕಾನೂನುಗಳನ್ನು ತಪ್ಪಾಗಿ ಅರ್ಥಮಾಡಿಕೊಳ್ಳಲಾಗಿದೆ ಹಾಗಾಗಿ ಈ ಬಗ್ಗೆ ಸೂಕ್ತವಾದ ವಿಚಾರಣೆ ನಡೆಸಿ ಹೈಕೋರ್ಟ್ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದೆ.

Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

ಇದಕ್ಕೂ ಮುನ್ನ ಕೇರಳದ (Kerala) ಮುಸ್ಲಿಂ ಸಂಘಟನೆಯೊಂದು ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ದಾಖಲಿಸಿತ್ತು. ಸಮಸ್ತ ಕೇರಳ ಜಮಾಯತ್ ಉಲ್ ಉಲಾಮಾ ಸಂಘಟನೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಕುರಾನ್ ನಲ್ಲಿ  ಮಹಿಳೆಯು ಕುತ್ತಿಗೆ, ತಲೆ ಮುಚ್ಚಿಕೊಳ್ಳುವುದು ಕಡ್ಡಾಯ ಎಂದು ಹೇಳಿದೆ ಎಂದು ಕೇರಳದ ಸಂಘಟನೆ ಅರ್ಜಿಯಲ್ಲಿ ತಿಳಿಸಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more