ತಮಿಳುನಾಡಿನಲ್ಲಿ (Tamilnadu) ಸಂಭವಿಸಿದ ಸೇನಾ ಹೆಲಿಕಾಪ್ಟರ್ ( IAF Chopper Crash) ದುರಂತದಲ್ಲಿ ಬದುಕುಳಿದ ಏಕೈಕ ಸೇನಾಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ (Capt Varun Singh) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ.
ಬೆಂಗಳೂರು (ಡಿ. 10): ತಮಿಳುನಾಡಿನಲ್ಲಿ (Tamilnadu) ಸಂಭವಿಸಿದ ಸೇನಾ ಹೆಲಿಕಾಪ್ಟರ್ ( IAF Chopper Crash) ದುರಂತದಲ್ಲಿ ಬದುಕುಳಿದ ಏಕೈಕ ಸೇನಾಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ (Capt Varun Singh) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ.
ಬುಧವಾರದಿಂದ ಊಟಿಯ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಏರ್ ಆ್ಯಂಬುಲೆನ್ಸ್‌ನಲ್ಲಿ ಗುರುವಾರ ಕರೆತಂದು ಎಚ್‌ಎಎಲ್ ರಸ್ತೆಯ ಕಮಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.