ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್!

ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್!

Published : Feb 17, 2021, 12:05 PM ISTUpdated : Feb 17, 2021, 12:08 PM IST

ರಾಜಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್ ನೀಡಿದೆ. ಬೆಂಗಳೂರು, ಮಂಗಳೂರು, ತುಮಕೂರು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

 

ಬೆಂಗಳೂರು(ಫೆ.17): ರಾಜಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್ ನೀಡಿದೆ. ಬೆಂಗಳೂರು, ಮಂಗಳೂರು, ತುಮಕೂರು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ರಾಜಧಾನಿ ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಮೆಡಿಕಲ್ ಕಾಲೇಜು, ಪ್ರತಿಷ್ಠಿತ ಬಿಜಿಎಸ್ ಶಿಕ್ಷಣ ಸಂಸ್ಥೆ,  ತುಮಕೂರಿನ ಶ್ರೀದೇವಿ ಕಾಲೇಜು, ಮಂಗಳೂರಿನ ಖ್ಯಾತ ಉದ್ಯಮಿ ಬಿ ಆರ್ ಶೆಟ್ಟಿ ಸೇರಿದಂತೆ ಉದ್ಯಮಿಗಳ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳ ಮೇಲೆ ಐಟಿ ಇಲಾಖೆ ಬುಧವಾರ ದಾಳಿ ನಡೆಸಿದೆ.

ರಾಜ್ಯದಲ್ಲಿ ಮತ್ತೆ ಐಟಿ ಬೇಟೆ: ಖ್ಯಾತ ಉದ್ಯಮಿ ಮನೆ ಮೇಲೆ ದಾಳಿ

ಮಂಗಳೂರಿನ ವಿವಿಧ ಉದ್ಯಮಿಗಳ ಆಸ್ಪತ್ರೆ, ಮನೆ, ಕಚೇರಿಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖ್ಯಾತ ಉದ್ಯಮಿ ಎ ಜೆ ಶೆಟ್ಟಿ ಅವರ ಬೆಂದೂರ್ ವೆಲ್ ನಲ್ಲಿರುವ ನಿವಾಸದ ಮೇಲೆ, ಮಂಗಳೂರಿನಲ್ಲಿರುವ ಎ ಜೆ ಆಸ್ಪತ್ರೆ, ಯೆನೆಪೋಯ ಆಸ್ಪತ್ರೆ ಮೇಲೆ ದಾಳಿ ನಡೆದಿದೆ.

ಅಕ್ರಮ ಆಸ್ತಿ ಸಂಪಾದನೆ, ಕಪ್ಪು ಹಣ ಸಂಗ್ರಹದ ಆರೋಪವಿದ್ದು, ವೈದ್ಯಕೀಯ ಕಾಲೇಜುಗಳಲ್ಲಿ ಸೀಟಿಗಾಗಿ ಲಕ್ಷ ಲಕ್ಷ ಸುಲಿಗೆ ನಡೆಸುತ್ತಿದ್ದಾರೆ, ಆಸ್ಪತ್ರೆಗಳಲ್ಲಿ ರೋಗಿಗಳಿಂದ ಚಿಕಿತ್ಸೆ ಹೆಸರಿನಲ್ಲಿ ಲಕ್ಷಗಟ್ಟಲೆ ಹಣ ಪೀಕಲಾಗುತ್ತಿದ್ದು ಸರಿಯಾದ ಆದಾಯ ತೆರಿಗೆ ವಿವರ ನೀಡುತ್ತಿಲ್ಲ, ತೆರಿಗೆ ಕಟ್ಟುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು ಈ ಸಂಬಂಧ ದಾಳಿ ನಡೆದಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?