ಡಿ.05ಕ್ಕೆ ಕರ್ನಾಟಕ ಬಂದ್, ಡಿ.08ಕ್ಕೆ ಭಾರತ್ ಬಂದ್, ಕೊರೋನಾ ನಡುವೆ ಸಂಕಷ್ಟ!

Dec 4, 2020, 11:41 PM IST

ಮರಾಠ ಅಭಿವೃದ್ಧಿ ನಿಗಮ ರಚಿಸಿದ ಕರ್ನಾಟಕ ಸರ್ಕಾರದ ನಿರ್ಧಾರ ಖಂಡಿಸಿ ನಾಳೆ(ಡಿ.05)ಕ್ಕೆ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಇದಕ್ಕೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಇದೀಗ ಡಿಸೆಂಬರ್ 8ಕ್ಕೆ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ.