ಪ್ರಾಚೀನ ಪರಂಪರೆಗೆ ಆಧುನಿಕ ಸ್ಪರ್ಶ: ಮೋದಿ ಸರ್ಕಾರದ ಅವಧಿಯಲ್ಲಿ ಭಾರತದ ಆಧ್ಯಾತ್ಮಿಕ ಪುನರುತ್ಥಾನ!

ಪ್ರಾಚೀನ ಪರಂಪರೆಗೆ ಆಧುನಿಕ ಸ್ಪರ್ಶ: ಮೋದಿ ಸರ್ಕಾರದ ಅವಧಿಯಲ್ಲಿ ಭಾರತದ ಆಧ್ಯಾತ್ಮಿಕ ಪುನರುತ್ಥಾನ!

Published : Sep 15, 2025, 05:58 PM IST
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸುವಲ್ಲಿ ಕೇಂದ್ರ ಸರ್ಕಾರದ ಪ್ರಯತ್ನಗಳು ಫಲ ನೀಡುತ್ತಿವೆ. ಕಾಶಿ ವಿಶ್ವನಾಥ ಕಾರಿಡಾರ್ ಮತ್ತು ಮಹಾಕಾಲ್ ಲೋಕ್ ಯೋಜನೆಗಳು ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಗಳಾಗಿವೆ. ಈ ಯೋಜನೆಗಳು ಭಕ್ತರಿಗೆ ಅನುಕೂಲಕರ ಮತ್ತು ದೈವಿಕ ಅನುಭವವನ್ನು ಒದಗಿಸುತ್ತಿವೆ.

ನವದೆಹಲಿ (ಸೆ.15): ಭಾರತದ ಸಾವಿರಾರು ವರ್ಷಗಳ ಪ್ರಾಚೀನ ಪರಂಪರೆ ಮತ್ತು ಆಧ್ಯಾತ್ಮಿಕತೆಗೆ ಮರುಜೀವ ನೀಡುವ ಸಂಕಲ್ಪದೊಂದಿಗೆ 2014ರ ನಂತರ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ದೇಶದ ಸಾಂಸ್ಕೃತಿಕ ಕ್ಷೇತ್ರಕ್ಕೆ ಹೊಸ ಭಾಷ್ಯ ಬರೆದಿದೆ. ಕೇವಲ ಸಂರಕ್ಷಣೆಯಲ್ಲ, ಪರಂಪರೆಯನ್ನು ಅಭಿವೃದ್ಧಿಯೊಂದಿಗೆ ಬೆಸೆಯುವ ಮೂಲಕ ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು ತೋರಿಸಿದೆ. ಸರ್ಕಾರದ ಈ ಪ್ರಯತ್ನಗಳು ಇದೀಗ ಫಲ ನೀಡಲು ಆರಂಭಿಸಿದ್ದು, ದೇಶ-ವಿದೇಶಗಳಲ್ಲಿ ಭಾರತದ ಸಾಂಸ್ಕೃತಿಕ ಕೀರ್ತಿ ಪತಾಕೆ ಹಾರುತ್ತಿದೆ.

Narendra Modi ರಾಜಕೀಯ ಸನ್ಯಾಸ ? ಮುಂದಿನ ಪ್ರಧಾನಿ ಯಾರು? ದೇಶಕ್ಕೇನಾಗಲಿದೆ? ಈ ಭವಿಷ್ಯವಾಣಿ ಕೇಳಿ…

ಕಾಶಿ ವಿಶ್ವನಾಥ ಕಾರಿಡಾರ್: ವಾರಣಾಸಿಯ ಕಿರಿದಾದ ರಸ್ತೆಗಳು, ಪ್ರಾಚೀನ ಘಟ್ಟಗಳ ನಡುವೆ ಇದ್ದ ಕಾಶಿ ವಿಶ್ವನಾಥ ದೇಗುಲಕ್ಕೆ ಆಧುನಿಕ ಸ್ಪರ್ಶ ನೀಡಲಾಗಿದೆ. ಸುಮಾರು ₹339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 'ಶ್ರೀ ಕಾಶಿ ವಿಶ್ವನಾಥ ಕಾರಿಡಾರ್' ಅನ್ನು ಡಿಸೆಂಬರ್ 13, 2021 ರಂದು ಉದ್ಘಾಟಿಸಲಾಯಿತು. ಇದು ಭಕ್ತರಿಗೆ ಸುಲಭ ದರ್ಶನ ಮತ್ತು ದೈವಿಕ ಅನುಭೂತಿ ನೀಡುವಲ್ಲಿ ಯಶಸ್ವಿಯಾಗಿದೆ.

ಮಹಾಕಾಲ್ ಲೋಕ್ ಯೋಜನೆ: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲೇಶ್ವರ ದೇವಸ್ಥಾನದಲ್ಲಿ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸಲು 'ಮಹಾಕಾಲ್ ಲೋಕ್' ಯೋಜನೆಯನ್ನು ಜಾರಿಗೆ ತರಲಾಗಿದೆ. ಇದು ಯಾತ್ರಾರ್ಥಿಗಳ ಅನುಭವವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more